ಗುಜರಾತ್ ಕಾಂಗ್ರೆಸ್ ಶಾಸಕಿ ಆಶಾ ಪಟೇಲ್ ರಾಜೀನಾಮೆ

ಗಾಂಧಿನಗರ್: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಗುಜರಾರ್ ಕಾಂಗ್ರೆಸ್ ಶಾಸಕಿ ಆಶಾ ಪಟೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಗೆ ಸೇರ್ಪಡೆಯಾಗುವ ಸದಹ್ಯತೆಯಿದೆ.

ಗುಜರಾತ್ ನ ಮೆಹಶಾನಾ ಜಿಲ್ಲೆಯ ಉನ್ಜಾಹ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಜೊತೆ ಮಾತುಕತೆ ನಡೆಸಿದ 3 ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ.

ರಾಜೀನಾಮೆ ನೀಡಿದ ಸುದ್ದಿ ತಿಳಿಯುತ್ತಿದ್ದಂತೆಯೇ ಆಶಾ ಅವರ ಕಚೇರಿಯ ಮೇಲೆ ಗುಂಪೊಂದು ದಾಳಿ ನಡೆಸಿದೆ. ವಿಷಯ ತಿಳಿದ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಬಿಗಿ ಬಂದೋಬಸ್ತ್ ನೀಡಲಾಗಿದೆ.

ಮೀಸಲಾತಿ ತರುವ ಮೂಲಕ ಜಾತಿಗಳನ್ನು ಒಗ್ಗೂಡಿಸುತ್ತಿದ್ದೀರಿ. ಕಾಂಗ್ರೆಸ್ ಪಕ್ಷದೊಳಗಿನ ಗುಂಪುಗಾರಿಕೆಯಿಂದ ಬೇಸತ್ತು ತಾವು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಆಶಾ ಪಟೇಲ್ ಹೇಳಿದ್ದಾರೆ. ಈ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೂ ಕೂಡಾ ಪತ್ರ ಬರೆದು ವಿವರಿಸಿದ್ದಾರೆ.

ಆಶಾ ಪಟೇಲ್ ಪಾಟೀದಾರ್ ಹೋರಾಟದ ಮುಖಂಡ ಹಾರ್ದಿಕ್ ಪಟೇಲ್ ಜೊತೆ ನಿಕಟ ಸಂಪರ್ಕ ಹೊಂದಿದ್ದರು. ಅಷ್ಟೇ ಅಲ್ಲ 2017ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್ ಅಭ್ಯರ್ಥಿ ನಾರಾಯಣ್ ಪಟೇಲ್ ಅವರನ್ನು 20 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದರು.

Gujarat Congress MLA Asha Patel resigns, may join BJP

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ