ನವದೆಹಲಿ: ಇತ್ತೀಚೆಗೆ ಸಕ್ರಿಯ ರಾಜಕಾರಣಕ್ಕೆ ಸೇರಿದ್ದ ಪ್ರಿಯಾಂಕಾ ಗಾಂಧಿ ಅವರಿಗೆ ನವದೆಹಲಿಯ ಎಐಸಿಸಿ ಪಕ್ಷದ ಕೇಂದ್ರ ಕಛೇರಿಯಲ್ಲಿ ಪ್ರತ್ಯೇಕ ಕಚೇರಿಯನ್ನ ನೀಡಲಾಗಿದೆ.
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಿಯಾಂಕಾ ಗಾಂಧಿ ಅವರನ್ನು ಕಾಂಗ್ರೆಸ್ ಅಧಿಕೃತವಾಗಿ ಪಕ್ಷದ ಕಾರ್ಯಚಟುವಟಿಕೆಗಳಿಗೆ ಕರೆತಂದಿತ್ತು. ಈ ಹಿನ್ನಲೆಯಲ್ಲಿ ಪ್ರಿಯಾಂಕ ಗಾಂಧಿ ಅವರನ್ನ ಉತ್ತರಪ್ರದೇಶ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.
ಉತ್ತರಪ್ರದೇಶದಲ್ಲಿ ಮಾಯಾವತಿ ಹಾಗೂ ಅಖಿಲೇಶ್ ಯಾದವ್, ಕಾಂಗ್ರೆಸ್ ಅನ್ನು ಹೊರಗಿಟ್ಟೇ ಮೈತ್ರಿ ಮಾಡಿಕೊಂಡಿತ್ತು. ಇದರಿಂದ ಎಚ್ಚೆತ್ತುಕೊಂಡ ರಾಹುಲ್, ಸಹೋದರಿ ಪ್ರಿಯಾಂಕಳನ್ನ ಅಧಿಕೃತವಾಗಿ ಪಕ್ಷದಲ್ಲಿ ಸ್ಥಾನ ಮಾನ ಕಲ್ಪಿಸಿ ಅಖಾಡಕ್ಕಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ನವದೆಹಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪ್ರಿಯಾಂಕಗೆ ಕಛೆರಿಯೊಂದನ್ನು ನೀಡಲಾಗಿದ್ದು, ಸಿಬ್ಬಂದಿ ಅವರಿಗೆ ಅಲಾಟ್ ಮಾಡಲಾದ ರೂಮ್ಗೆ ಪ್ರಿಯಾಂಕ ಗಾಂಧಿ ಅವರ ನೇಮ್ ಪ್ಲೇಟ್ ಅಳವಡಿಕೆ ಮಾಡಿದ್ದಾರೆ.
Lok Sabha Elections 2019, Priyanka Gandhi Vadra’s, Office