ಬಿಜೆಪಿ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ ರಾಮ್‌ಲಾಲ್

​​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಮ್‌ಲಾಲ್ ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು. ರಾಮ್​ಲಾಲ್ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ ಎಂಎಲ್‌ಸಿ ನಾರಾಯಣಸ್ವಾಮಿ ಕಾಲಿಗೆ ಬಿದ್ದು ನಮಸ್ಕರಿಸಿದರು.

ಬಿಜೆಪಿಯಲ್ಲಿ ಚುನಾವಣೆ, ಪಕ್ಷದ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿವೆ. ಈ ಸಭೆ ರಾಮ್​ಲಾಲ್‌ ನೇತೃತ್ವದಲ್ಲಿ ನಡೆಯಲಿದ್ದು, ಲೋಕಸಭೆ ಚುನಾವಣೆಯ ಪೂರ್ವ ತಯಾರಿ, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರಲ್ಲಿ ಸಕಾರಾತ್ಮಕ‌ ಪ್ರತಿಫಲ ಪಡೆಯಲು ಈ ಸಭೆ ನಡೆಯಲಿದೆ ಎನ್ನಲಾಗುತ್ತಿದೆ.

ಇದಲ್ಲದೇ ಆಡಳಿತ ಪಕ್ಷದ‌ ನ್ಯೂನ್ಯತೆಯ ಬಗ್ಗೆ ತಿಳಿದು, ಅವರ ಅಡಳಿತ ವೈಫಲ್ಯವನ್ನು ಜನರಿಗೆ ತಿಳಿಸುವಂತೆ ಮಾಡುವುದರ ಜೊತೆಯಲ್ಲಿ ಕೆಳ‌ಹಂತದಿಂದ‌ ಪಕ್ಷವನ್ನು ಬಲಿಷ್ಠ ಮಾಡಬೇಕು ಅನ್ನೋ ಉದ್ದೇಶ ಕೂಡ ಈ ಸಭೆಯಲ್ಲಿ ಚರ್ಚೆ ಆಗಲಿದೆ. ಅಲ್ಲದೆ ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಕೂಡ ಈ ಸಂದರ್ಭದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ