ಯಾವುದೇ ಕಾರಣಕ್ಕೂ ಕೇಸ್ ವಾಪಸ್ ತೆಗೆದುಕೊಳ್ಳುವುದಿಲ್ಲ: ಶಾಸಕ ಆನಂದ್ ಸಿಂಗ್

ಬೆಂಗಳೂರು, ಫೆ.6- ತಮ್ಮ ಮೇಲೆ ಹಲ್ಲೆ ನಡೆಸಿದ ಕಂಪ್ಲಿ ಶಾಸಕ ಗಣೇಶ್ ಅವರ ಮೇಲಿನ ಕೇಸನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ಶಾಸಕ ಆನಂದ್‍ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಅಧಿವೇಶನದಲ್ಲಿಂದು ಪಾಲ್ಗೊಂಡಿದ್ದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಗಣೇಶ್ ಅವರೊಂದಿಗೆ ಯಾವುದೇ ಕಾರಣಕ್ಕೂ ರಾಜಿ-ಸಂಧಾನದ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು.

ಈವರೆಗೆ ಯಾರೂ ಕೂಡ ರಾಜಿ-ಸಂಧಾನದ ಮಾತುಕತೆಯಾಡಿಲ್ಲ. ಘಟನೆ ನಂತರ ಕಂಪ್ಲಿ ಶಾಸಕ ಗಣೇಶ್ ಕೂಡ ತಮ್ಮನ್ನು ಭೇಟಿಯಾಗಿಲ್ಲ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ತಮ್ಮ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಇನ್ನೂ 15 ರಿಂದ 20 ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ತಮಗಿನ್ನೂ ಕಣ್ಣು , ಎದೆ ಭಾಗದಲ್ಲಿ ನೋವಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ