ಕಾಂಗ್ರೆಸ್ ಟಿಕೆಟ್ ಕೊಡಿ

ಬೀದರ್: ಬರುವ ಲೋಕಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಕೋಟಾದಡಿ ಬೀದರ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತನಗೆ ನೀಡಬೇಕು ಎಂದು ಆಕಾಂಕ್ಷಿ, ಕೆಪಿಸಿಸಿ ಕಾರ್ಯದರ್ಶಿ ಎಂ.ಡಿ. ಅಯಾಜ್ ಖಾನ್ ಕೋರಿದ್ದಾರೆ.

ಕಲಬುರ್ಗಿಯಲ್ಲಿ ಇತ್ತೀಚೆಗೆ ನಡೆದ ಜನಪ್ರತಿನಿಧಿಗಳು ಹಾಗೂ ಮುಖಂಡರ ಸಭೆಯಲ್ಲಿ ಕಾಂಗ್ರೆಸ್‍ನ ಹೈದರಾಬಾದ್ ಕರ್ನಾಟಕದ ಉಸ್ತುವಾರಿ, ಎಐಸಿಸಿ ಕಾರ್ಯದರ್ಶಿ ಸಾಕೆ ಸೈಲಜನಾಥ ಹಾಗೂ ಎಐಸಿಸಿ ಸದಸ್ಯ ಮಧು ಯಾಕ್ಷಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅಯಾಜ್ ಖಾನ್, ಬೀದರ್ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದವರು ಹೆಚ್ಚಾಗಿದ್ದಾರೆ. ಹೀಗಾಗಿ ತಮ್ಮನ್ನು ಪರಿಗಣಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಜಾತ್ಯತೀತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮುಸ್ಲಿಂ,ಎಸ್ಸಿ, ಎಸ್ಟಿ, ಕ್ರಿಶ್ಚಿಯನ್ ಹಾಗೂ ಹಿಂದುಳಿದ ವರ್ಗಗಳ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ ಗೆಲುವು ಖಚಿತ. ಆದ್ದರಿಂದ ಮುಸ್ಲಿಂ ಸಮುದಾಯದಿಂದ ಪ್ರತಿನಿಧಿಸುವ ತಮಗೆ ಟಿಕೆಟ್ ಕೊಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ಕಳೆದ ಎರಡು ದಶಕಗಳಿಂದ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಹಗಲಿರುಳು ಶ್ರಮಿಸುತ್ತಿದ್ದೇನೆ. ನೂರ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಮೂಲಕ ಹಿಂದುಳಿದ ಹೈಕ ಭಾಗದ ಶೈಕ್ಷಣಿಕ ಸುಧಾರಣೆ ಮಾಡುತ್ತಿರುವೆ. ಹೀಗಾಗಿ ಬರುವ ಲೋಕಸಭೆ ಚುನಾವಣೆಯಲ್ಲಿ ತಮಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಅಯಾಜ್ ಖಾನ್ ಬೆಂಬಲಿಗರು ಸಹ ಮನವಿ ಸಲ್ಲಿಸಿ, ಟಿಕೆಟ್ ನೀಡುವಂತೆ ಬೇಡಿಕೆ ಮಂಡಿಸಿದರು.
===============

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ