ಬರ ನಿರ್ವರ್ಹಣೆ ಕಾಮಗಾರಿಗಳನ್ನು ಸರ್ಕಾರ ಸಮರ್ಥವಾಗಿ ನಿರ್ವಹಿಸುತ್ತಿದೆ: ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರು, ಫೆ.6- ರಾಜ್ಯದ 3.28 ಲಕ್ಷ ರೈತರ ಬೆಳೆ ಸಾಲ ಮನ್ನಾ ಮಾಡಲು 1611 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯಪಾಲ ವಜುಬಾಯಿ ವಾಲಾ ಅವರು ಹೇಳಿದರು.

ಜಂಟಿ ಅಧಿವೇಶನವನ್ನುದ್ದೇಶಿಸಿ ಇಂದು ಮಾಡಿದ ಭಾಷಣದಲ್ಲಿ ಸಹಕಾರ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿರುವ ಅರ್ಹ ಕೃಷಿಕರ ಬೆಳೆಸಾಲ ಮನ್ನಾ ಮಾಡಲು ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

ಉದ್ಯೋಗಖಾತ್ರಿ ಯೋಜನೆಯಡಿ 18.6 ಲಕ್ಷ ಕುಟುಂಬಗಳಿಗೆ ಉದ್ಯೋಗ ಒದಗಿಸಲಾಗಿದೆ ಎಂದು ಹೇಳಿದರು. ಮುಂಗಾರು ಹಂಗಾಮಿನಲ್ಲಿ ಮೂರು ತಾಲೂಕುಗಳು, ಹಿಂಗಾರು ಹಂಗಾಮಿನಲ್ಲಿ 56 ತಾಲೂಕುಗಳು ಸೇರಿದಂತೆ 156 ತಾಲೂಕುಗಳು ಬರಪೀಡಿತವೆಂದು ಘೋಷಿಸಲಾಗಿದ್ದು, ಈ ತಾಲೂಕುಗಳಲ್ಲಿ ಬರ ನಿರ್ವಹಣೆ ಕಾಮಗಾರಿಗಳನ್ನು ನನ್ನ ಸರ್ಕಾರ ಸಮರ್ಥವಾಗಿ ನಿರ್ವಹಣೆ ಮಾಡುತ್ತಿದೆ ಎಂದು ಹೇಳಿದರು.

18.6 ಲಕ್ಷ ಕುಟುಂಬಗಳಿಗೆ ನರೇಗಾ ಯೋಜನೆಯಡಿ ಉದ್ಯೋಗ ಒದಗಿಸಲಾಗಿದೆ. ಇಸ್ರೇಲ್ ಮಾದರಿ ಕೃಷಿಯನ್ನು ಜಾರಿಗೊಳಿಸಲು ವಿಶೇಷ ಅಭಿಯಾನ ಮಾಡಲಾಗುತ್ತಿದೆ ಎಂದು ರಾಜ್ಯಪಾಲರು ತಿಳಿಸಿದರು.

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 3085 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ರೇಷ್ಮೆಗೆ ರಕ್ಷಣಾತ್ಮಕ ದರ ನೀಡಿ ಪೆÇ್ರೀ ಮತ್ಸ್ಯ ಜೋಪಾನ ಯೋಜನೆಗೆ 10 ಶೀಥಲೀಕರಣ ಘಟಕಗಳನ್ನು ಪ್ರಾರಂಭಿಸಲಾಗಿದೆ. ತೋಟಗಾರಿಕೆ ಬೆಳೆಗಳ ಪಾಲಿ ಹೌಸ್‍ಗಳಿಗೆ 60 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಹಸಿರೀಕರಣ ಮಾಡುವ ಉದ್ದೇಶದಿಂದ 652 ಲಕ್ಷ ಸಸಿಗಳನ್ನು ನೆಟ್ಟು ಪೆÇೀಷಿಸುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.
ಕೃಷಿ ಮಾರುಕಟ್ಟೆಗಳಲ್ಲಿ ವಿಕಿರಣ ಘಟಕಗಳಂತಹ ಸೌಲಭ್ಯಗಳನ್ನು ಒದಗಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ