ಬೆಂಗಳೂರು, ಫೆ.6- ಪಶ್ಚಿಮ ವಿಭಾಗದ ಪೆÇಲೀಸರು ಡಿಸಿಪಿ ರವಿ ಚನ್ನಣ್ಣನವರ್ ಅವರ ಮಾರ್ಗದರ್ಶನದಲ್ಲಿ ರೌಡಿಗಳು ಹಾಗೂ ಹಳೆ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.
ಈ ದಾಳಿ ತಡರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೂ ನಡೆದಿದ್ದು, ಒಟ್ಟು 120ಕ್ಕೂ ಹೆಚ್ಚು ರೌಡಿಗಳು ಹಾಗೂ ಹಳೆ ಆರೋಪಿಗಳನ್ನು ಆಯಾ ಠಾಣೆಗಳಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಪ್ರಸ್ತುತ ಇವರು ಮಾಡುತ್ತಿರುವ ಕೆಲಸ, ವಾಸಿಸುತ್ತಿರುವ ಸ್ಥಳದ ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಹಲವು ವಿವರಗಳನ್ನು ಪೆÇಲೀಸರು ಪಡೆದುಕೊಂಡಿದ್ದಾರೆ.
ದಾಳಿ ಸಂದರ್ಭದಲ್ಲಿ ಕೆಲವು ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಅವುಗಳನ್ನು ಸಹ ವಶಕ್ಕೆ ಪಡೆದಿದ್ದಾರೆ.
ಇದೇ ಸಂದರ್ಭದಲ್ಲಿ ಡಿಸಿಪಿ ರವಿ ಚನ್ನಣ್ಣನವರ್ ಹಲವು ಠಾಣೆಗಳಿಗೆ ತೆರಳಿ ಯಾವುದೇ ರೀತಿಯ ರೌಡಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಾರದು ಹಾಗೂ ಯಾವುದೇ ಅಕ್ರಮದಲ್ಲಿ ಭಾಗಿಯಾಗಬಾರದೆಂದು ರೌಡಿಗಳಿಗೆ ಹಾಗೂ ಹಳೆ ಆರೋಪಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.