ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳ ಅಭಿವೃದ್ಧಿಗೆ ವಿಸ್ತ್ರತ ಯೋಜನೆ

ಬೆಂಗಳೂರು, ಫೆ.6- ರಾಜ್ಯ ಹೆದ್ದಾರಿ ಹಾಗೂ ಪ್ರಧಾನ ಜಿಲ್ಲಾ ರಸ್ತೆಗಳ 7800 ಕಿಲೋ ಮೀಟರ್ ಉದ್ದದ ರಸ್ತೆಗಳ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ-4ಅನ್ನು ಜಾರಿಗೊಳಿಸಲು ವಿಸ್ತೃತ ಯೋಜನೆ ತಯಾರಿಸಲಾಗಿದೆ.
ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಧಿ-24 ಯೋಜನೆಯಡಿ 206 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 178 ರಸ್ತೆ, 35 ಸೇತುವೆ ನಿರ್ಮಾಣ ಯೋಜನೆಗಳಿಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.
2019ನೆ ಸಾಲಿನಲ್ಲಿ ಕಲಬುರಗಿ ಮತ್ತು ಬೀದರ್ ವಿಮಾನ ನಿಲ್ದಾಣಗಳು ಕಾರ್ಯಾಚರಣೆ ಆರಂಭಿಸಿವೆ. ಕಲಬುರಗಿಯಲ್ಲಿ ಪ್ರಾಯೋಗಿಕ ವಿಮಾನ ಹಾರಾಟ ಆರಂಭವಾಗಿದೆ.2816ಕಿಮೀ ಪ್ರಧಾನ ಜಿಲ್ಲಾ ರಸ್ತೆಗಳ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂಬ ಅಂಶವನ್ನು ರಾಜ್ಯಪಾಲರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ