ಬೆಂಗಳೂರು, ಫೆ.6- ಆನ್ಲೈನ್ ಸ್ವಯಂಚಾಲಿತ ಕಟ್ಟಡ ನಕ್ಷೆ ಅನುಮೋದನಾ ವ್ಯವಸ್ಥೆಯನ್ನು ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ.
26 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್ಲೈನ್ ಸ್ವಯಂಚಾಲಿತ ಕಟ್ಟಡ ನಕ್ಷೆ ಅನುಮೋದನಾ ವ್ಯವಸ್ಥೆ ಜಾರಿಗೊಳಿಸಲಾಗಿದೆ.ಈ ಯೋಜನೆಯನ್ನು ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ವಿಸ್ತರಿಸಲಾಗುವುದು ಎಂಬ ಅಂಶವನ್ನು ರಾಜ್ಯಪಾಲರು ತಮ್ಮ ಜಂಟಿ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ, ಮಂಗಳುರು, ದಾವಣಗೆರೆ, ಬೆಳಗಾವಿ ಹಾಗೂ ತುಮಕೂರು ನಗರಗಳಲ್ಲಿನ ನಗರ ಸ್ಥಳೀಯ ಸಂಸ್ಥೆಗಳ ಎಲ್ಲ ಆನ್ಲೈನ್ ಸೇವೆಗಳನ್ನು ಏಕೀಕೃತಗೊಳಿಸಲು ಕಮ್ಯಾಂಡ್ ಮತ್ತು ಕಂಟ್ರೋಲ್ ಕೇಂದ್ರಗಳ ಸ್ಥಾಪನೆ ಕುರಿತ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದೆ.