ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಸರ್ಕಾರ ಬದ್ದ

ಬೆಂಗಳೂರು, ಫೆ.6- ತೀವ್ರ ವಿವಾದದ ನಡುವೆಯೂ ರಾಜ್ಯ ಸರ್ಕಾರ ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಬದ್ಧವಾಗಿರುವುದಾಗಿ ಘೋಷಿಸಿದೆ.

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿ ರಾಜ್ಯಪಾಲ ವಜುಭಾಯಿ ವಾಲಾ ಅವರು, ಸಮ್ಮಿಶ್ರ ಸರ್ಕಾರದ ಬದ್ಧತೆಯನ್ನು ಸ್ಪಷ್ಟಪಡಿಸಿದರು.

ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಅನುಕೂಲವಾಗುವಂತೆ ಸಜ್ಜುಗೊಳಿಸಬೇಕಿದೆ. ಬಡ ವಿದ್ಯಾರ್ಥಿಗಳು ಇಂಗ್ಲಿಷ್ ಜ್ಞಾನದ ಕೊರತೆಯಿಂದ ಹಿಂದುಳಿಯಬಾರದು ಎಂಬ ಕಾರಣಕ್ಕಾಗಿ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುತ್ತಿದೆ.ಅಂದ ಮಾತ್ರಕ್ಕೆ ಕನ್ನಡಕ್ಕೆ ಪ್ರಾಮುಖ್ಯತೆ ನೀಡುವುದರಲ್ಲಿ ರಾಜೀಯಾಗುವುದಿಲ್ಲ. ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳಿಗೆ 450 ಕೋಟಿ ಅನುದಾನ ನೀಡಲಾಗಿದೆ.

ಹೆಣ್ಣು ಮಕ್ಕಳ ಶಿಕ್ಷಣ ಪೆÇ್ರೀ 3 ಲಕ್ಷ ವಿದ್ಯಾರ್ಥಿನಿಯರಿಗೆ 95 ಕೋಟಿ ಖರ್ಚು ಮಾಡಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಹಾಗೂ ಇಂಜಿನಿಯರ್ ಕಾಲೇಜುಗಳ ಮೂಲ ಸೌಕರ್ಯಕ್ಕೆ 750 ಕೋಟಿ ಬಿಡುಗಡೆ ಮಾಡಲಾಗಿದೆ.

ಅರಿವು ಯೋಜನೆಯಡಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮವು 28,731 ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ವ್ಯಾಸಂಗಕ್ಕಾಗಿ 70 ಕೋಟಿ ಸಾಲ ಮಂಜೂರು ಮಾಡಲಾಗಿದೆ. ವಿವಿಧ ವಿದ್ಯಾರ್ಥಿ ವೇತನ ಯೋಜನೆಯಡಿ 14.55 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ