ಬೆಂಗಳೂರು, ಫೆ.6- ಮಹಿಳೆಯರು ಮತ್ತು ಬಾಲಕಿಯರ ಸುರಕ್ಷತೆಗೆ ಮಹತ್ವ ನೀಡಿರುವ ಸರ್ಕಾರ ಎಲ್ಲ ಪೆÇಲೀಸ್ ಆಯುಕ್ತರ ಕಚೇರಿಗಳಲ್ಲಿ ನಿರ್ಭಯ ಕೇಂದ್ರಗಳನ್ನು ಸ್ಥಾಪಿಸುತ್ತಿದೆ ಎಂದು ರಾಜ್ಯಪಾಲ ವಿ.ಆರ್.ವಾಲಾ ತಿಳಿಸಿದ್ದಾರೆ.
ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ಮಹಿಳೆ ಮತ್ತು ಮಕ್ಕಳ ವಿರುದ್ಧದ ದೌರ್ಜನ್ಯ ಕುರಿತಂತೆ ದಾಖಲಾದ ಪ್ರಕರಣಗಳ ವಿಚಾರಣೆ ನಡೆಸಲು ಎಲ್ಲ ಜಿಲ್ಲೆಗಳಲ್ಲಿ ಒಂದು ಹೆಚ್ಚುವರಿ ಸೆಷನ್ ನ್ಯಾಯಾಲಯ ಮತ್ತು ಬೆಂಗಳೂರಿನಲ್ಲಿ ಒಂದು ಹೆಚ್ಚುವರಿ ಸಿವಿಲ್ ನ್ಯಾಯಾಲಯ ಸ್ಥಾಪಿಸಿದೆ.
ವಿಶೇಷ ನ್ಯಾಯಾಲಯಗಳಲ್ಲಿ ಹಿಂಸೆಗೊಳಗಾದ ಮಹಿಳೆಯರ ಕರೆಗೆ 24 ಗಂಟೆಗಳ ಕಾಲ ಸ್ಪಂದಿಸುವ ಉದ್ದೇಶದಿಂದ ನನ್ನ ಸರ್ಕಾರ ಮಹಿಳಾ ಸಹಾಯವಾಣಿ-181ಅನ್ನು ಜಾರಿಗೊಳಿಸಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಾಗೂ ಎಲ್ಲ ಬಗೆಯ ತುರ್ತು ಮತ್ತು ಅಪಾಯದ ಕರೆಗಳಿಗೆ ಏಕೀಕೃತ ತುರ್ತು ಪ್ರತಿಸ್ಪಂದನಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದರು.
ಸಂಚಾರಿ ನಿಯಮಗಳ ಕಟ್ಟುನಿಟ್ಟಿನ ಜಾರಿಗೆ ಸ್ವಯಂ ಚಲನ್ ಸೃಜನ ವ್ಯವಸ್ಥೆ, ಡಿಜಿಟಲ್ ಕ್ಷೇತ್ರ ಸಂಚಾರಿ ಉಲ್ಲಂಘನಾ ವರದಿಗಳ ಟ್ಯಾಬ್ಗಳನ್ನು ಸರ್ಕಾರ ಪರಿಚಯಿಸುತ್ತಿದೆ.
ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಪೆÇಲೀಸರಿಗೆ ಅತ್ಯಾಧುನಿಕ ತಂತ್ರಜ್ಞಾನ ಮತ್ತು ವ್ಯವಸ್ಥೆಗಳನ್ನು ಒದಗಿಸುವ ಉದ್ದೇಶದಿಂದ ಜಿಲ್ಲಾ ಮತ್ತು ಪೆÇಲೀಸ್ ಆಯುಕ್ತರ ಕಚೇರಿಗಳಲ್ಲಿ ಸೈಬರ್ ವಿಧಿ-ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ ಎಂದು ರಾಜ್ಯಪಾಲರು ವಿವರಣೆ ನೀಡಿದ್ದಾರೆ.