ಮೈತ್ರಿ ಸರ್ಕಾರದಿಂದ ಕೈಗಾರಿಕ ಅಭಿವೃದ್ಧಿಗೆ ಉತ್ತೇಜನ: ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರು, ಫೆ.6- ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿ 3.49 ಲಕ್ಷ ಕೋಟಿ ರೂ.ಗಳ ಬಂಡವಾಳ ಹೂಡಿಕೆ ಮಾಡುವ ಮೂಲಕ 10.28 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ 1958 ಯೋಜನೆಗಳಿಗೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಮುನ್ನುಡಿ ಬರೆದಿದೆ ಎಂದು ರಾಜ್ಯಪಾಲರು ವಿವರಿಸಿದ್ದಾರೆ.

ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ಒಂಬತ್ತು ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್‍ಗಳನ್ನು ಅಭಿವೃದ್ಧಿಪಡಿಸುವುದಕ್ಕಾಗಿ ಕಾಂಪಿಟ್ ವಿತ್ ಚೈನಾ ಎಂಬ ಯೋಜನೆ ಅನುಷ್ಠಾನಗೊಳಿಸುತ್ತಿದ್ದು, ಪ್ರತಿಯೊಂದು ಕ್ಲಸ್ಟರ್ ತನ್ನ ನಿರ್ದಿಷ್ಟ ಸಾಮಥ್ರ್ಯದ ಮೇಲೆ ಕೇಂದ್ರೀಕೃತವಾಗಿರಲಿದೆ ಎಂದು ಹೇಳಿದ್ದಾರೆ.
ಯುವಜನತೆ ಉದ್ಯೋಗಾವಕಾಶ ಪಡೆಯಲು ಶಕ್ತರಾಗುವಂತೆ ಅತ್ಯಾಧುನಿಕ ತಂತ್ರಜ್ಞಾನಗಳ ವಿಷಯದಲ್ಲಿ ತರಬೇತಿ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ.

2018-19ರಲ್ಲಿ ವೃತ್ತಿ ತರಬೇತಿ ಸಂಸ್ಥೆಗಳ ಮೂಲಕ 2.50 ಲಕ್ಷ ಜನರಿಗೆ ತರಬೇತಿ ನೀಡುವ ಮಹತ್ವಾಕಾಂಕ್ಷೆ ಯೋಜನೆ ಅನುಷ್ಠಾನದಲ್ಲಿದೆ ಎಂದು ವಾಲಾ ತಿಳಿಸಿದರು.

ಐಟಿ-ಬಿಟಿಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ 2025ರ ವೇಳೆಗೆ 20ಸಾವಿರ ನವೋದ್ಯಮಗಳು ಆರಂಭಗೊಳ್ಳುವ ವಿಶ್ವಾಸವನ್ನು ರಾಜ್ಯಪಾಲರು ವ್ಯಕ್ತಪಡಿಸಿದ್ದಾರೆ.

ನವೋದ್ಯಮಗಳನ್ನು ಪೆÇ್ರೀ ಸಲುವಾಗಿ 58ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ