ಅರಣ್ಯ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ: ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರು, ಫೆ.6- ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 666 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇಲಾಖೆಗೆ 3085 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಹೆಚ್ಚುವರಿ ಉದ್ಯೋಗಗಳನ್ನು ಮಂಜೂರು ಮಾಡಲಾಗಿದೆ ಎಂದು ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು.

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು, ರಾಜ್ಯದಲ್ಲಿ ಹಸಿರು ವಲಯವನ್ನು ಹೆಚ್ಚಿಸಲು ಹಸಿರು ಕರ್ನಾಟಕ ಆಂದೋಲನವನ್ನು ಪ್ರಾರಂಭಿಸಲಾಗಿದೆ. ಸಸಿಗಳನ್ನು ನೆಡುವ ಮೂಲಕ ಜನರ ಪಾಲ್ಗೊಳ್ಳುವಿಕೆಗೆ ಉತ್ತೇಜನ ನೀಡಲಾಗುತ್ತಿದೆ.2019ರ ಮಳೆಗಾಲದ ಅವಧಿಯಲ್ಲಿ 652 ಲಕ್ಷ ಸಸಿಗಳನ್ನು ನೆಡುವ ಗುರಿ ಇದ್ದು, ಇದಕ್ಕಾಗಿ ಪೂರ್ವ ಸಿದ್ಧತಾ ಚಟುವಟಿಕೆಗಳು ನಡೆಯುತ್ತಿವೆ.

ನದಿಗಳ ನೀರಿನ ಒಳ ಹರಿವನ್ನು ಹೆಚ್ಚಿಸಲು ಕರ್ನಾಟಕ ನದಿ ಸಂರಕ್ಷಣಾ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅರಣ್ಯ ಭದ್ರತೆ ಮತ್ತು ಸಂರಕ್ಷಣೆಯನ್ನು ಬಲಪಡಿಸುವ ದೃಷ್ಟಿಯಿಂದ ಹೊಸ ನೇಮಕಾತಿಯನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದ್ದು, ಹೆಚ್ಚುವರಿ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ