ಬೆಂಗಳೂರು, ಫೆ.6- ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲ ವಜುಬಾಯಿ ವಾಲಾ ಅವರನ್ನು ವಿಧಾನಸಭಾಧ್ಯಕ್ಷ ರಮೇಶ್ಕುಮಾರ್, ವಿಧಾನ ಪರಿಷತ್ ಸಭಾಪತಿ ಪ್ರತಾಪ್ಚಂದ್ರಶೆಟ್ಟಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸ್ವಾಗತಿಸಿದರು.
ವಿಧಾನಸೌಧಕ್ಕೆ ಇಂದು ಬೆಳಗ್ಗೆ ಆಗಮಿಸಿದ ರಾಜ್ಯಪಾಲರನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಗಣ್ಯರು ಸ್ವಾಗತಿಸಿದರು.
ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಿದ ನಂತರ ಸಭಾಧ್ಯಕ್ಷರು, ಸಭಾಪತಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಅವರನ್ನು ಆತ್ಮೀಯವಾಗಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿಮತ್ತಿತರ ಗಣ್ಯರು ಉಪಸ್ಥಿತರಿದ್ದರು.