
ಬೆಂಗಳೂರು,ಫೆ.7-ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ ಹಣದ ಆಮಿಷ ವೊಡ್ಡಲಾಗಿದೆ ಎಂಬ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಮಾಜಿ ಸಚಿವ ಸಿ.ಟಿ.ರವಿ ಸವಾಲು ಹಾಕಿದರು.
ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ ಕೋಟಿ ರೂ.ಗಳ ಆಫರ್ ನೀಡಲಾಗಿದೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಯಾವುದೇ ಆಪರೇಷನ್ ಮಾಡಿಲ್ಲ. ವಿನಾಕಾರಣ ನಮ್ಮ ಮೇಲೆ ಆರೋಪ ಮಾಡುವುದು ಬೇಡ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಬಹುಮತವಿಲ್ಲ. ರಾಜ್ಯಪಾಲರನ್ನು ಭೇಟಿಯಾಗುವ ಬಗ್ಗೆ ನಮ್ಮ ನಾಯಕರಾದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ತೀರ್ಮಾನ ಮಾಡುತ್ತಾರೆ. ಸಿದ್ದರಾಮಯ್ಯನವರು ಸತ್ಯಕ್ಕೆ ದೂರವಾದ ಆರೋಪವನ್ನು ಮಾಡುವುದು ಸರಿಯಲ್ಲ ಎಂದರು.
ಅವರೊಬ್ಬ ವಕೀಲರಾಗಿ ಈ ರೀತಿ ಆರೋಪಿಸಿರುವುದು ಸಮಂಜಸವಲ್ಲ ಎಂದು ಟೀಕಿಸಿದರು .