ಬಿಜೆಪಿಯವರು ಧರಣಿ ಮಾಡುವ ಬದಲು ಅವಿಶ್ವಾಸ ನಿರ್ಣಯ ಮಂಡಿಸಲಿ: ಸಿಎಂ.ಕುಮಾರಸ್ವಾಮಿ

ಬೆಂಗಳೂರು, ಫೆ.7- ಬಿಜೆಪಿಯವರು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ವಿಶ್ವಾಸ ಮತವನ್ನು ಸದನದಲ್ಲಿ ಸಾಬೀತು ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ವಿಧಾನಸಭೆ ಅಧಿವೇಶನದಲ್ಲಿ ಧರಣಿ ಮಾಡದೆ ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಟ್ಟರೆ ನಾನೇ ವಿಶ್ವಾಸ ಮತ ಸಾಬೀತು ಮಾಡುತ್ತೇನೆ ಎಂದರು.

ಪ್ರಜಾಪ್ರಭುತ್ವದಲ್ಲಿ ಮೊದಲ ಬಾರಿಗೆ ಸರ್ಕಾರಕ್ಕೆ ಬಹುಮತ ಇಲ್ಲ ಎಂದು ಬಿಜೆಪಿ ಧರಣಿ ಮಾಡುತ್ತಿದೆ. ಧರಣಿ ಮಾಡುವ ಬದಲು ಅವಿಶ್ವಾಸ ನಿರ್ಣಯ ಮಂಡಿಸಲಿ ಎಂದ ಅವರು, ಯಾವ ಉದ್ದೇಶಕ್ಕಾಗಿ ಧರಣಿ ಮಾಡುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವರು ಬಜೆಟ್ ಮಂಡನೆ ಮಾಡುವಾಗ ಸಂಸದರಿಗೆ ಬಜೆಟ್ ಪ್ರತಿ ನೀಡುವುದಿಲ್ಲ. ಬಜೆಟ್ ಮಂಡನೆ ಮುಗಿದ ನಂತರ ಪ್ರತಿಯನ್ನು ನೀಡಲಾಗುತ್ತದೆ.ಅದನ್ನೇ ನಾಳೆ ಬಜೆಟ್ ಸಂದರ್ಭದಲ್ಲಿ ಅನುಸರಿಸಲಾಗುತ್ತಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ