
ಬೆಂಗಳೂರು,ಫೆ.7- ಕಾಂಗ್ರೆಸ್ ಪಕ್ಷದ ಒಬ್ಬೇ ಒಬ್ಬ ಶಾಸಕರೂ ಕೂಡ ಪಕ್ಷ ಬಿಟ್ಟು ಹೋಗೋಲ್ಲ. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ನಾಗೇಂದ್ರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ಎಲ್ಲ ಶಾಸಕರು ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೇ ಆಪರೇಷನ್ ಕಮಲ ಕುರಿತಂತೆ ಸಾಕಷ್ಟು ಡೆಡ್ಲೈನ್ ನೀಡಿದ್ದಾರೆ. ಅದ್ಯಾವುದೂ ಕೂಡ ಯಶಸ್ವಿಯಾಗಿಲ್ಲ ಎಂದು ಟೀಕಿಸಿದರು.