ರಾಜ್ಯಸರ್ಕಾರದಿಂದ ಆರ್‍ಟಿಇ ತಿದ್ದುಪಡಿಗೆ ವಿದ್ಯಾರ್ಥಿಗಳು ಮತ್ತು ಪೋಷಕರ ವಿರೋಧ

Varta Mitra News

ಬೆಂಗಳೂರು, ಫೆ.7- ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್‍ಟಿಇ)ಗೆ ರಾಜ್ಯಸರ್ಕಾರ ತಿದ್ದುಪಡಿ ತಂದಿರುವುದನ್ನು ವಿದ್ಯಾರ್ಥಿಗಳು ಹಾಗೂ ಪೆÇೀಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಆರ್‍ಟಿಇ ಅಡಿ ಖಾಸಗಿ ಶಾಲೆಗಳಲ್ಲಿ ಸೀಟು ಪಡೆಯಬಹುದಾಗಿತ್ತು.ಆದರೆ, ರಾಜ್ಯಸರ್ಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಗೆ ತಿದ್ದುಪಡಿ ತಂದು ಅಧಿಸೂಚನೆ ಹೊರಡಿಸಿಬಿಟ್ಟಿದೆ. ಹಾಗಾಗಿ ಇನ್ನು ಮುಂದೆ ಆರ್‍ಟಿಇ ಅಡಿ ಮಕ್ಕಳನ್ನು ದಾಖಲಿಸಲು ಪೆÇೀಷಕರು ಸರ್ಕಾರಿ ಶಾಲೆಗಳಿಗೇ ಮೊದಲು ಅರ್ಜಿ ಸಲ್ಲಿಸಬೇಕಾಗುತ್ತದೆ.

ನಂತರ ಸರ್ಕಾರಿ ಶಾಲೆಯಲ್ಲಿ ಸೀಟು ಸಿಗದೆ ಹೋದರೆ ಖಾಸಗಿ ಶಾಲೆಗಳ ಮೊರೆ ಹೋಗಬೇಕಾಗುತ್ತದೆ.ಇದರಿಂದ ಮಕ್ಕಳಿಗೆ ಅನ್ಯಾಯವಾಗುತ್ತದೆ ಎಂದು ಆರ್‍ಟಿಇ ವಿದ್ಯಾರ್ಥಿಗಳು ಮತ್ತು ಪೆÇೀಷಕರ ಸಂಘ ಆರೋಪಿಸಿದೆ.

ಸರ್ಕಾರದ ಈ ತಿದ್ದುಪಡಿ ವಿರುದ್ಧ ಪೆÇೀಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಖಾಸಗಿ ಶಾಲೆಗಳ ಲಾಬಿಗೆ ರಾಜ್ಯಸರ್ಕಾರ ಮಣಿದು ಈ ನಿಯಮವನ್ನು ಜಾರಿಗೆ ತಂದಿದೆ.ಇದರಿಂದ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಓದಲು ಸಾಧ್ಯವಾಗುವುದಿಲ್ಲ. ಇದು ಅನ್ಯಾಯ ಎಂದು ಸಂಘದ ಪದಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಕೂಡಲೇ ಇದನ್ನು ವಾಪಸ್ ಪಡೆಯದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್.ಯೋಗಾನಂದ ಪತ್ರಿಕೆಗೆ ತಿಳಿಸಿದ್ದಾರೆ.
ಅಲ್ಲದೆ, ಈ ತಿದ್ದುಪಡಿಗೆ ತಡೆಯಾಜ್ಞೆ ನೀಡಬೇಕೆಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವುದಾಗಿಯೂ ಅವರು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ