ಬೆಂಗಳೂರು, ಫೆ.9-ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸೋಮಣ್ಣ ಅವರು ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ನೋಡಬೇಕು ಎಂದಿದ್ದರು.
ಸೋಮಣ್ಣ ಅವರ ಈ ಹೇಳಿಕೆ ಕುರಿತಂತೆ ಕಾರ್ಯಕ್ರಮ ಮುಗಿದ ತಕ್ಷಣ ಮಾಧ್ಯಮದವರು ಪ್ರಶ್ನಿಸಿದಾಗ, ಪರಮೇಶ್ವರ್ ಯಾಕೆ ನಾನು ಸಿಎಂ ಆಗ್ಬಾರ್ದಾ… ಸೋಮಣ್ಣ ಹೇಳಿರೋದ್ರಲ್ಲಿ ತಪ್ಪೇನಿದೆ… ಎಂದು ಸಿಡಿಮಿಡಿಗೊಂಡರು.
ರಾಜ್ಯದ ಜನತೆಯ ಹಿತ ಕಾಪಾಡುವ ಉದ್ದೇಶದಿಂದ ಮುಖ್ಯಮಂತ್ರಿಗಳು ಅತ್ಯುತ್ತಮ ಬಜೆಟ್ ಮಂಡನೆ ಮಾಡಿದ್ದಾರೆ. ಬಿಜೆಪಿಯವರಿಗೆ ಈ ಬಗ್ಗೆ ತಕರಾರು ಇದ್ದರೆ ಅಧಿವೇಶನದಲ್ಲಿ ಚರ್ಚೆ ಮಾಡಲಿ ಎಂದು ಡಿಸಿಎಂ ಅವರು ಕಿವಿಮಾತು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಯಾವ ಅತೃಪ್ತ ಶಾಸಕರೂ ಇಲ್ಲ. ಎಲ್ಲರೂ ನಮ್ಮ ಸಂಪರ್ಕದಲ್ಲೇ ಇದ್ದಾರೆ.ಕೆಲವು ಅತೃಪ್ತರ ಫೆÇೀಟೋಗಳು ಮುಂಬೈನಿಂದ ಬಂದಿವೆ ಅನ್ನೋದಕ್ಕೆ ಏನು ಗ್ಯಾರಂಟಿ ಇದೆ ಎಂದು ಪರಂ ಪ್ರಶ್ನಿಸಿದರು.
ನಮ್ಮ ಸರ್ಕಾರ ಸದೃಢವಾಗಿದ್ದು, ಬಿಜೆಪಿಯವರಿಂದ ಸರ್ಕಾರ ಪತನಗೊಳಿಸಲು ಸಾಧ್ಯವಾಗದ ಮಾತು.ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಮುಂದೊಂದು ದಿನ ಆ ಪಕ್ಷದವರಿಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಪಕ್ಷದಿಂದಲೂ ಆಪರೇಷನ್ ಹಸ್ತ ನಡೆಯುತ್ತಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಿಮಗೆ ಗೊತ್ತಿಲ್ಲದೆ ನಾವು ಏನೂ ಮಾಡಲು ಆಗುವುದಿಲ್ಲ. ಮುಂದೆ ಎಲ್ಲವೂ ನಿಮಗೆ ತಿಳಿಯಲಿದೆ ಎಂದು ಹೇಳಿದರು.