ಬೆಂಗಳೂರು, ಫೆ.9- ಸದೃಢ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆಗಳು ಸಹಕಾರಿ.ಎಲ್ಲರೂ ಒಂದಲ್ಲಾ ಒಂದು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಅವರ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭ ಎಂದು ಮಾಜಿ ರಣಜಿ ಆಟಗಾರ ಕೆಂಗಲ್ ಹನುಂತಯ್ಯ ಮೆಮೋರಿಯಲï ಟ್ರಸ್ಟ್ನ ಸಂಸ್ಥಾಪಕ ಅಧ್ಯಕ್ಷ ಹಾಗೂ ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ ರೇಣು ಹೇಳಿದ್ದಾರೆ.
ನಗರದ ಮಲ್ಲೇಶ್ವರಂ ಆಟದ ಮೈದಾನದಲ್ಲಿ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಟೂರ್ನಮೆಂಟ್ಗೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಮೊದಲ ಚುನಾಯಿತ ಮುಖ್ಯಮಂತ್ರಿ ಹಾಗೂ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರು ರಾಜ್ಯಕ್ಕೆ ಹಾಗೂ ದೇಶಕ್ಕೆ ನೀಡಿದ ಕೊಡುಗೆ ಅಪಾರ.
ರಾಜ್ಯದ ನಿರ್ಮಾಣಕ್ಕೆ ಸುಸ್ಥಿರ ಅಡಿಪಾಯ ಹಾಕಿದವರು. ಅಲ್ಲದೆ, ರಾಜ್ಯ ಹಾಗೂ ದೇಶದ ಅಭಿವೃದ್ದಿಗೆ ತಮ್ಮದೇ ಅದ ವಿಶಿಷ್ಟ ಕೊಡುಗೆಗಳನ್ನು ನೀಡಿದ್ದಾರೆ ಎಂದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಹೆಚ್.ಸಿ.ಚಂದ್ರಶೇಖರ್, ಎನ್. ಸುರೇಶ್, ಕೆ.ನರಸಿಂಗರಾವ್, ಎಂ.ವಿಶ್ವನಾಥ್, ಕೆ.ಎಂ.ಮಂಜುನಾಥ್ ಭಾಗವಹಿಸಿದ್ದರು.