ಬಿಜೆಪಿಗೆ 200 ಕೋಟಿ ಹಣ ಎಲ್ಲಿಂದ ಬಂತು: ಕಾಂಗ್ರೆಸ್ ಪ್ರಶ್ನೆ

ನವದೆಹಲಿ: ಸಮ್ಮಿಶ್ರ ಸಕಾರದ ಶಾಸಕರಿಗೆ ಆಪರೇಶನ್ ಕಮಲಕ್ಕೆ ಒಡ್ಡುತ್ತಿರುವ ಆಮಿಷದ ಹಣ ಬಿಜೆಪಿಗೆ ಎಲ್ಲಿಂದ ಬಂತು..? 200 ಕೋಟಿ ರೂ ಹಣ ಕಪ್ಪು ಹಣವೇ ಬಿಳಿಹಣವೇ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪ್ರಶ್ನಿಸಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ರಣದೀಪ್ ಸುರ್ಜೇವಾಲ, ದೇವದುರ್ಗದ ಐಬಿಯಲ್ಲಿ ಆಪರೇಶನ್ ಕಮಲಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ನಡೆಸಿದ ಮಾತುಕತೆ ಕುರಿತು ಸಿಎಂ ಕುಮಾರಸ್ವಾಮಿ ಬಿಡುಗಡೆ ಮಾಡಿದ ಆಡಿಯೋವನ್ನು ಇಂಗ್ಲಿಷ್ ಕ್ಯಾಪ್ಶನ್ ನಲ್ಲಿ ಬಿಡುಗಡೆಮಾಡಿದರು.

ಈ ವೇಳೆ ಮಾತನಾಡಿದ ಕೆ ಸಿ ವೇಣುಗೋಪಾಲ್, ಈ ಆಡಿಯೋದಲ್ಲಿ ಹದಿನೆಂಟು ಶಾಸಕರು ಸಂಪರ್ಕದಲ್ಲಿ ಇದ್ದಾರೆ. ಪ್ರತಿ ಶಾಸಕರಿಗೆ ಹತ್ತು ಕೋಟಿ, ಸ್ಪೀಕರ್ ಗೆ 50 ಕೋಟಿ ಹಾಗೂ ಸುಪ್ರೀಂಕೋರ್ಟ್ ಜಡ್ಜ್ ಗಳನ್ನು ಮ್ಯಾನೇಜ್ ಮಾಡುವುದಾಗಿ ಬಿಜೆಪಿ ನಾಯಕರು ಹೇಳಿದ್ದಾರೆ. ಶಾಸಕರಿಗೆ ಹಣ ಕೊಡಲು 200 ಕೋಟಿ ಹಣ ಬಿಜೆಪಿಗೆ ಎಲ್ಲಿಂದ ಬಂತು ಎನ್ನುವುದನ್ನು ಉತ್ತರಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಡೆಸುತ್ತಿರುವ ಕುತಂತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೆಂಬಲ ನೀಡುತ್ತಿದ್ದು, ಕುದುರೆ ವ್ಯಾಪಾರಕ್ಕಾಗಿ ಕೋಟ್ಯಂತರ ರೂಪಾಯಿ ಆಮಿಷ ಒಡ್ಡಲಾಗುತ್ತಿದೆ ಈ ಎಲ್ಲಾ ಹಣಗಳು ಕಪ್ಪು ಹಣವೋ ಬಿಳಿ ಹಣವೋ ಎಂಬುದನ್ನು ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಳಿಕ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ, ಕರ್ನಾಟಕದಲ್ಲಿನ ಸಾಂವಿಧಾನ ಬದ್ಧ ಸರ್ಕಾರವನ್ನು ಉರುಳಿಸಲು ಬಿಜೆಪಿ ಯತ್ನಿಸಿದೆ. ಪ್ರತಿ ಶಾಸಕನಿಗೆ ಹತ್ತು ಕೋಟಿ ಡಿಮ್ಯಾಂಡ್ ಮಾಡಿದ್ದ ಸ್ಪೀಕರ್‍ಗೆ ಐವತ್ತು ಕೋಟಿ ನೀಡುವ ಬಗ್ಗೆ ಆಡಿಯೋ ದಾಖಲೆ ಇದೆ. ಅಧಿಕಾರಕ್ಕಾಗಿ ಪ್ರಜಾಪ್ರಭುತ್ವ ಕೊಲೆ ಮಾಡಲು ಹೊರಟಿರುವ ಬಿಜೆಪಿ ನಡೆ ರಾಷ್ಟ್ರೀಯ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

congress,k c venugopal,bjp,oparation kamala

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ