ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಇಬ್ಬರ ಬಂಧನ

ಬೆಂಗಳೂರು, ಫೆ.10- ಹೊರರಾಜ್ಯದಿಂದ ಹುಡುಗಿಯರನ್ನು ಮಾನವ ಕಳ್ಳ ಸಾಗಾಣಿಕೆ ಮಾಡಿಕೊಂಡು ಬಂದು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ.

ಮುನೇಶ್ವರ ಲೇಔಟ್‍ನ ಸುಧೀರ್ (32), ಮೂಲತಃ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಉಳುವೆ ಗ್ರಾಮದ ಸೂಚನ್‍ಗೌಡ (29) ಬಂಧಿತ ಆರೋಪಿಗಳು.

ಬಂಧಿತರಿಂದ ಮೂರು ಮೊಬೈಲ್, ಏಳು ಸಾವಿರ ರೂ.ಗಳನ್ನು ವಶಪಡಿಸಿಕೊಂಡು ಹೊರರಾಜ್ಯದ ಮೂವರು ಹುಡುಗಿಯರನ್ನು ರಕ್ಷಿಸಲಾಗಿದೆ.

ಆರೋಪಿಗಳು ಬೇರೆ ರಾಜ್ಯದಿಂದ ಹುಡುಗಿಯರನ್ನು ಕಳ್ಳ ಸಾಗಾಣಿಕೆ ಮಾಡಿಕೊಂಡು ಬಂದು ಹಣದ ಆಮಿಷ ತೋರಿಸಿ ಯಲಹಂಕ ಪೆÇಲೀಸ್ ಠಾಣೆ ವ್ಯಾಪ್ತಿಯ ಬಾಗಲೂರು ಮುಖ್ಯರಸ್ತೆ, ರಾಮಣ್ಣ ಗಾರ್ಡನ್‍ನಲ್ಲಿರುವ ಲಾಡ್ಜ್‍ವೊಂದರಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿದ್ದರು.

ಅಪರ ಪೆÇಲೀಸ್ ಆಯುಕ್ತ ಅಲೋಕ್‍ಕುಮಾರ್, ಉಪ ಪೆÇಲೀಸ್ ಆಯುಕ್ತ ಗಿರೀಶ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಬಿ.ಎಸ್.ಮೋಹನ್‍ಕುಮಾರ್ ಅವರ ನೇತೃತ್ವದಲ್ಲಿ ಲಾಡ್ಜ್ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಸಂಬಂಧ ಯಲಹಂಕ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ