ಯಾರೂ ಕೂಡ ವಾಸ್ತವಾಂಶವನ್ನು ಮುಚ್ಚಿಡಲು ಆಗುವುದಿಲ್ಲ:ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಫೆ.10- ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಯಾರೂ ಕೂಡ ವಾಸ್ತವಾಂಶವನ್ನು ಮುಚ್ಚಿಡಲು ಆಗುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯ ಅವರ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಇರುವ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪರೇಷನ್ ಕಮಲದ ಸಂಬಂಧ ಶರಣಗೌಡ ಅವರೊಂದಿಗೆ ನಡೆಸಿರುವ ಮಾತುಕತೆ ಆಡಿಯೋ ನಮ್ಮದೇ ಎಂದು ಒಪ್ಪಿಕೊಂಡಿದ್ದಾರೆ.ಅವರ ಆತ್ಮಸಾಕ್ಷಿಗೆ ಅಭಿನಂದನೆ ಸಲ್ಲಿಸುತ್ತೇನೆ. ಯಾವುದೇ ಸುಳ್ಳನ್ನು ಹೆಚ್ಚು ದಿನ ಬಚ್ಚಿಡಲು ಸಾಧ್ಯವಾಗುವುದಿಲ್ಲ. ಧ್ವನಿ ಸುರುಳಿ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ.ಶಾಸಕರ ಪುತ್ರ ಶರಣಗೌಡ ಅವರೂ ಕೂಡ ಮಾತನಾಡಿದ್ದಾರೆ.ಯಡಿಯೂರಪ್ಪನವರು ಮಾತನಾಡಿದ್ದು ನಿಜ ಎಂದು ಹೇಳಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಮಾಜಿ ಸಚಿವ ಜನಾರ್ಧನರೆಡ್ಡಿ ಕಾಂಗ್ರೆಸ್ ಶಾಸಕರೊಬ್ಬರಿಗೆ ಇದೇ ರೀತಿ ಫೆÇೀನ್ ಮಾಡಿದ್ದರು.ಆಗ ನಾನು ಫೆÇೀನ್ ರಿಸೀವ್ ಮಾಡಿ ಹೊಸ ಶಾಸಕರಿಗೆ ತೊಂದರೆ ಕೊಡಬೇಡಿ. ನನ್ನನ್ನೇ ಮುಖ್ಯಮಂತ್ರಿ ಮಾಡಿ, ನಾನೇ ನಿಮ್ಮ ಪಕ್ಷಕ್ಕೆ ಬರುತ್ತೇನೆ ಎಂದು ಹೇಳಿದ್ದೆ ಎಂದರು.

ವಾಸ್ತವಾಂಶಗಳನ್ನು ಮರೆಮಾಚಲು ಸಾಧ್ಯವಾಗುವುದಿಲ್ಲ. ಶಿವರಾಮ್ ಹೆಬ್ಬಾರ್ ಅವರ ಪತ್ನಿ ಜತೆ ಮಾತನಾಡಿದ್ದು ಸುಳ್ಳೆ, ಬಿ.ಸಿ.ಪಾಟೀಲ್ ಅವರ ಜತೆ ಮಾತುಕತೆ ನಡೆಸಿರಲಿಲ್ಲವೇ ಎಂದು ಪ್ರಶ್ನಿಸಿದರು.

ಬಿಜೆಪಿಯಿಂದಲೂ ಸಿಡಿ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಪ್ರಸ್ತಾಪಿಸಿರುವ ವಿಚಾರ ಈಗಾಗಲೇ ಜೆಡಿಎಸ್‍ನಲ್ಲಿ ಚರ್ಚೆಯಾಗಿದೆ.ಮುಖ್ಯಮಂತ್ರಿ ಕಮಾರಸ್ವಾಮಿ ಅವರೇ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ.ಬಿಜೆಪಿಯವರು ಹತಾಶರಾಗಿ ಬೋಗಸ್ ಅಥವಾ ಫಿಲ್ಮ್ ಅಂತ ಹೇಳಲಿ.ಯಾರು ಏನು ಬೇಕಾದರೂ ವಾದ ಮಾಡಲಿ. ವಿಧಾನಸಭಾಧ್ಯಕ್ಷರು ಆಪರೇಷನ್ ಕಮಲ ಆರೋಪ ಇರುವ ಧ್ವನಿ ಸುರುಳಿಯ ಬಗ್ಗೆ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ. ನಾಳಿನ ಅಧಿವೇಶನದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕೇಂದ್ರ ಸರ್ಕಾರ ಇಂದು ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಆಹ್ವಾನ ನೀಡದೆ ಇರುವುದು ರಾಜ್ಯಕ್ಕೆ ಮಾಡಿದ ಅಪಮಾನ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯ ಅವರ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಇರುವ ಹನುಮಂತಯ್ಯ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಮುಖ್ಯಮಂತ್ರಿಯನ್ನು ಕೇಂದ್ರ ಸರ್ಕಾರ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕಿತ್ತು. ಯಾರೇ ಮುಖ್ಯಮಂತ್ರಿಯಾದರೂ ಕೇಂದ್ರ ಸರ್ಕಾರ ಆಹ್ವಾನ ನೀಡಬೇಕಾಗಿತ್ತು. ಕುಮಾರಸ್ವಾಮಿ ಎಂಬ ಕಾರಣಕ್ಕೆ ಕರೆಯುವುದು ಬೇಡ. ಆದರೆ, ಅವರುರಾಜ್ಯದ ಮುಖ್ಯಮಂತ್ರಿ ಎಂಬ ಕಾರಣಕ್ಕೆ ಕರೆಯಬೇಕಿತ್ತು. ಅವರು ಕಾರ್ಯಕ್ರಮಕ್ಕೆ ಹೋಗಲು ತಯಾರಾಗಿದ್ದರು.ಆದರೆ, ಕೇಂದ್ರ ಸರ್ಕಾರ ಅವರನ್ನು ಆಹ್ವಾನಿಸದೆ ಅವಮಾನ ಮಾಡಿದೆ.ಇದು ರಾಜ್ಯಕ್ಕೆ ಮಾಡಿದ ಅಪಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೆಂಗಲ್ ಹನುಮಂತಯ್ಯ ಅವರ ಪುತ್ರಿ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ