ವಿಜಯಪುರ, ಫೆ.10- ಪೆÇಲೀಸ್ ವೇತನ, ಸೌಲಭ್ಯ ಮುಂಬಡ್ತಿ ಒಳಗೊಂಡಂತೆ ನೀಡಿರುವ ಔರಾದ್ಕರ್ ವರದಿ ಜಾರಿ ಮಾಡೇ ಮಾಡುತ್ತೇವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ನಲ್ಲಿ ಔರಾದ್ಕರ್ ವರದಿ ಜಾರಿ ಆಗದೇ ಇರುವ ಹಿನ್ನೆಲೆಯಲ್ಲಿ ಪೆÇಲೀಸ್ ಇಲಾಖೆ ಸಿಬ್ಬಂದಿ ತೀವ್ರ ಬೇಸರಗೊಂಡಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಅಸಮಾಧಾನ ವ್ಯಕ್ತವಾಗಿದೆ.ಈ ಹಿನ್ನೆಲೆಯಲ್ಲಿ ನನ್ನ ಅವಧಿಯಲ್ಲಿಯೇ ಔರಾದ್ಕರ್ ವರದಿ ಜಾರಿಗೆ ಒತ್ತು ಕೊಡಲಾಗುವುದು ಎಂದು ಹೇಳಿದ್ದಾರೆ.
ಕೆಲ ಆರ್ಥಿಕ ಸಮಸ್ಯೆ ಇರುವ ಕಾರಣ ಬಜೆಟ್ನಲ್ಲಿ ಘೋಷಣೆ ಮಾಡಲು ಸಾಧ್ಯವಾಗಿಲ್ಲ. ಪೆÇಲೀಸ್ ಇಲಾಖೆಯವರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.