ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಫೇಲಿಯಾ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ವ್ಯಂಗ್ಯವಾಡಿದ್ದಾರೆ.
ಗುಜರಾತಿನಲ್ಲಿ ನಡೆಯುತ್ತಿರುವ ಕ್ಲಸ್ಟರ್ ಸಭೆಯಲ್ಲಿ ಭಾಗವಹಿಸಲು ತೆರಳಿರುವ ಚೌಹಾಣ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ರಾಹುಲ್ ಸುಳ್ಲಿನ ರಾಜ. ಅವರು ರಫೇಲಿಯಾ ಕಾಯಿಲೆಯಿಂದ ಬಳಲುತ್ತಿದ್ದು, ಅವರಿಗೆ ರಫೇಲ್ ಬಿಟ್ಟರೆ ಬೇರೆಯಾವ ವಿಷಯವೂ ಕಾಣುತ್ತಿಲ್ಲ. ಮುಂಬರುವ ಚುನಾವಣೆಯಲ್ಲಿ ಜನರು ಅವರಿಗೆ ಈ ಕಾಯಿಲೆಗೆ ಸೂಕ್ತ ಚಿಕಿತ್ಸೆ ಕೊಡಲಿದ್ದು ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.
ರಾಜ್ಯದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೇರಿದ 10 ದಿನಗಳೊಳಗೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಅವರು ಹೇಳಿದ್ದರು. ಆದರೀಗ ಸರಕಾರ ರಚಿಸಿ 2 ತಿಂಗಳಾಗಿದೆ. ಆದರೆ ಸಾಲ ಮನ್ನಾ ಮಾತ್ರ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಕಿಡಿಕಾರಿದ್ದಾರೆ.
Rahul gandhi,ShivrajSingh Chouhan