ಯಡಿಯೂರಪ್ಪನವರಿಗೆ ಅಧಿಕಾರದ ಹುಚ್ಚು ಹಿಡಿದಿದೆ: ಮಾಜಿ ಸಿ.ಎಂ.ಸಿದ್ದರಾಮಯ್ಯ

ಹೊಸದುರ್ಗ,ಫೆ.10- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಅಧಿಕಾರದ ಹುಚ್ಚು ಹಿಡಿದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಂವಿಧಾನಬದ್ಧವಾಗಿ ಸರ್ಕಾರ ರಚನೆಯಾಗಿದೆ.ಇಂತಹ ಸಮ್ಮಿಶ್ರ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಯಡಿಯೂರಪ್ಪನವರು ಕುತಂತ್ರದಿಂದ ಸರ್ಕಾರವನ್ನು ಅತಂತ್ರಗೊಳಿಸುವ ಕಾರ್ಯಕ್ಕೆ ಕೈ ಹಾಕಿದ್ದಾರೆ.ಇದರಲ್ಲಿ ಅವರಿಗೆ ಯಾವುದೇ ರೀತಿಯ ಯಶಸ್ಸು ಸಿಗುತ್ತಿಲ್ಲ. ಸಿಗುವುದೂ ಇಲ್ಲ.ಆದರೂ ವಿಫಲ ಯತ್ನಗಳನ್ನೇ ಮಾಡುತ್ತಲೇ ಇದ್ದಾರೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಗಾದಿಯ ಕನಸು ಕಾಣುತ್ತಿರುವ ಯಡಿಯೂರಪ್ಪನವರಿಗೆ ಒಂದು ರೀತಿ ಅಧಿಕಾರದ ಹುಚ್ಚು ಹಿಡಿದಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ