ಬೆಂಗಳೂರು, ಫೆ.11-ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇನ್ನೂ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲೇ ಅವರು ಇದ್ದಾರೆ ಎಂಬ ಬಗ್ಗೆ ತಿಳಿದು ಬಂದಿದೆ ಅಷ್ಟೆ.ಬೆಂಗಳೂರಿನಲ್ಲೇ ಇದ್ದರೇ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡಲಾಗುವುದು ಎಂದರು.
ರಮೇಶ್ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವ ಕುರಿತು ಸುದ್ದಿಗಳು ಹರಿದಾಡುತ್ತಿವೆ. ಮುಂದೆ ಏನಾಗುತ್ತೋ ಕಾದು ನೋಡೋಣ ಎಂದು ಅವರು ತಿಳಿಸಿದರು.