ಮಗ ಅಕ್ರಮ ಆಸ್ಥಿ ಪಡೆದಿದ್ದಾರೆ ಎಂಬ ಆರೋಪದ ಹಿನ್ನಲೆ ಸಚಿವರು ರಾಜೀನಾಮೆ ನೀಡಲಿ: ಶಾಸಕ ಸಿ.ಟಿ.ರವಿ

ಬೆಂಗಳೂರು, ಫೆ.13- ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡರ ಮಗ ಅಕ್ರಮ ಆಸ್ತಿ ಪಡೆದಿದ್ದಾರೆ ಎಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ವೆಂಕಟರಾವ್ ನಾಡಗೌಡರು ರಾಜೀನಾಮೆ ನೀಡಬೇಕೆಂದು ಶಾಸಕ ಸಿ.ಟಿ.ರವಿ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಹೋದವರ ಆಸ್ತಿಯನ್ನು ಅಕ್ರಮವಾಗಿ ವೆಂಕಟರಾವ್ ನಾಡಗೌಡರ ಮಗ ಪಡೆದಿದ್ದಾರೆ ಎಂಬ ಬಗ್ಗೆ ವಿಭಾಗೀಯ ಆಯುಕ್ತರು ವರದಿ ನೀಡಿದ್ದಾರೆ ಎಂದು ಆರೋಪಿಸಿದರು.

ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಸಚಿವರ ರಾಜಕೀಯ ಪ್ರಭಾವದಿಂದಲೇ ಆ ರೀತಿ ಮಾಡಿಕೊಳ್ಳಲಾಗಿದೆ.ಇದು ಅಪ್ರಾಮಾಣಿಕತೆಗೆ ಸಾಕ್ಷಿಯಾಗಿದೆ ಎಂದರು.

ಮಾಸಾಶನ ಬಿಡುಗಡೆಗೆ ಆಗ್ರಹ: ತುಮಕೂರಿನ ಧರಣೇಶ್ ಎಂಬ ವಿಕಲಚೇತನರಿಗೆ ಮಾಸಾಶನ ದೊರೆಯದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಸರ್ಕಾರಕ್ಕೆ ಪಾಠವಾಗಿದ್ದು, ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ಬಿಡುಗಡೆ ಮಾಡಲು ಸಮಾಜ ಕಲ್ಯಾಣ ಸಚಿವರು ಕ್ರಮ ಕೈಗೊಳ್ಳಬೇಕು. ಕುರ್ಚಿ ಉಳಿಸಿಕೊಳ್ಳುವುದರಲ್ಲಿ ನಿರತರಾಗಿದ್ದಾರೆಯೇ ಹೊರತು ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಆಗ್ರಹಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ