ಬೆಂಗಳೂರು,ಫೆ.13-ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರೆ ಮಾನಸಿಕವಾಗಿ ದೈಹಿಕವಾಗಿ ಸದೃಡರಾಗಲು ಸಾಧ್ಯ ಎಂದು ಶಾಸಕ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ನಾರಾಯಣ ಶಿಕ್ಷಣ ಸಂಸ್ಥೆಯಕೇಲೋತ್ಸವವನ್ನು ಉದ್ಘಾಟಿಸಿ ಮಾತನಾಡಿದಅವರು ಕ್ರೀಡೆಗಳಲ್ಲಿ ತೊಡಗದ ವಿದ್ಯಾರ್ಥಿಗಳು ದೈಹಿಕ ಸದೃಡತೆ ಹೊಂದಲು ಸಾಧ್ಯವಿಲ್ಲ ಎಂದರು.
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಲು ಇತ್ತೀಚಿನ ದಿನಗಳಲ್ಲಿ ಉತ್ತಮ ಸೌಲಭ್ಯಗಳು ದೊರೆಯುತ್ತವೆ ಖಾಸಗಿ ಶಿಕ್ಷಣ ಸಂಸ್ಥೆಗಳು ಕೂಡ ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿವೆ ಎಂದು ಹೇಳಿದರು.
ನಾರಾಯಣ ಶಿಕ್ಷಣ ಸಂಸ್ಥೆಯು ಮೊದಲಿನಿಂದಲೂ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಉತ್ತಮ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಿ ಕ್ರೀಡೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕಿ ಸೌಮ್ಯರೆಡ್ಡಿ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ತೊಡಗಲು ಕೇಲೋತ್ಸವ ನಡೆಸಿ ಪೆÇ್ರೀ ನೀಡಬೇಕುಎಂದು ಹೇಳಿದರು.
ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡದ ನಾಯಕ ಸಂಜಯ್‍ರಾಜ್, ಪ್ಯಾರಾ ಒಲಂಪಿಯನ್ ಸಿಮ್ಮರ್ ಶರತ್‍ಗಾಯಕ್ವಾಡ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಸಿಂಧೂರ ನಾರಾಯಣ, ಕಾರ್ಯನಿರ್ವಾಹಕ ನಿರ್ದೇಶಕ ಪುನೀತ್ ಕೋತಪ, ನಿರ್ದೇಶಕರಾದ ರಮಾ ನಾರಾಯಣ, ಪದ್ಮಜಾ ಕೋ ತಪ, ಕಾಲೇಜಿನ ಡೀನ್‍ಗಳಾದ ಸುರೇಂದ್ರನಾಥ ರೆಡ್ಡಿ, ಸಾಯಿರಾಮ ಪಾಲ್ಗೊಂಡಿದ್ದರೆ.