ಬೆಂಗಳೂರು, ಫೆ.13- ಬಡ್ತಿ ಮೀಸಲಾತಿ ಸೇರಿದಂತೆ ಇನ್ನಿತರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆ.25ರಂದು ಬೃಹತ್ ಸಮಾವೇಶವನ್ನು ಫ್ರೀಡಂ ಪಾರ್ಕ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಮಾವೇಶದ ರ್ಯಾಲಿಯು ಟೌನ್‍ಹಾಲ್‍ನಿಂದ ತೆರಳಿ ಫ್ರೀಡಂ ಪಾರ್ಕ್ ತಲುಪಲಿದೆ ಎಂದು ತಿಳಿಸಿದರು.
ಸಮಾವೇಶದಲ್ಲಿ ಕರ್ನಾಟಕದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷರನ್ನು ಕಳೆದ 10 ತಿಂಗಳಿಂದ ನೇಮಕ ಮಾಡಿಲ್ಲ. ದಲಿತ ಜನಾಂಗಕ್ಕೆ ಸರ್ಕಾರ ದ್ರೋಹ ಬಗೆದಿದೆ. ನಾಡಿನ ದಲಿತರ ಅಭ್ಯುದಯದ ಯೋಜನೆ ಫಲಾನುಭವಿಗಳ ಪಟ್ಟಿ ಸಿದ್ಧತೆಯಲ್ಲಿ ಶಾಸಕರ ಅಧ್ಯಕ್ಷತೆಯ ಸಮಿತಿಯನ್ನು ರದ್ದುಪಡಿಸಿ ಆಯಾ ಇಲಾಖೆಗೆ ಅಧಿಕಾರಿಗಳ ಆಯ್ಕೆ ಮಾಡಬೇಕು ಎಂದು ಆಗ್ರಹಿಸಲಾಗುವುದು ಎಂದರು.
ಒಕ್ಕೂಟದ ಪದಾಧಿಕಾರಿಗಳಾದ ಕೇಶವಮೂರ್ತಿ, ವೈ.ಎಸ್. ದೇವೂರ್, ಅರ್.ಎಂ.ಎನ್.ರಮೇಶ್, ಮುನಿ ಆಂಜಿನಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.