ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು

ದಾಬಸ್‍ಪೇಟೆ, ಫೆ. 14- ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಅಹಿತಕರ ಘಟನೆ ಸಂಭವಿಸಿದೆ.

ಮಗಸಾವು-ಅಪ್ಪ ಗಂಭೀರ
ಇಂದು ಮುಂಜಾನೆ ಮಂಜುನಾಥ್ ಎಂಬುವರು ತಂದೆ ಅಂಜನಪ್ಪ ಅವರನ್ನು ಬೈಕ್‍ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಿರಾ ಮೂಲದ ಮಂಜುನಾಥ್ (25) ಮೃತಪಟ್ಟ ದುರ್ದೈವಿ.ಅಪಘಾದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅಂಜನಪ್ಪ ಅವರನ್ನು ದಾಬಸ್‍ಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಜುನಾಥ ಮತ್ತು ಆಂಜನಪ್ಪ ಬೈಕ್‍ನಲ್ಲಿ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 4ರ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್‍ಪೇಟೆ ಫ್ಲೈಓವರ್ ಮೇಲೆ ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯನ್ನು ಗಮನಿಸದೆ ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದು ಲಾರಿಗೆ ಅಪ್ಪಳಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ವಾಹನ ಡಿಕ್ಕಿ: ಅಪರಿಚಿತ ವ್ಯಕ್ತಿ ಸಾವು
ರಸ್ತೆ ಬದಿ ನಡೆದುಹೋಗುತ್ತಿದ್ದ ವ್ಯಕ್ತಿಗೆ ಯಾವುದೋ ವಾಹನ ಡಿಕ್ಕಿ ಹೊಡೆದು ತಲೆ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತ ವ್ಯಕ್ತಿಯ ಹೆಸರು, ವಿಳಾಸ ತಿಳಿದು ಬಂದಿಲ್ಲ.

ಸುಮಾರು 40ವರ್ಷದಂತೆ ಕಾಣುವ ಈ ವ್ಯಕ್ತಿಯ ಶವವನ್ನು ನೆಲಮಂಗಲ ಸರಕಾರಿ ಆಸ್ಪತ್ರೆಯಲ್ಲಿಡಲಾಗಿದೆ.ರಾಷ್ಟ್ರೀಯ ಹೆದ್ದಾರಿ 4ರ ದಾಮೋದರ್ ಕಂಪನಿಯ ಸಮೀಪ ಈ ವ್ಯಕ್ತಿ ರಾತ್ರಿ ನಡೆದು ಹೋಗುತ್ತಿದ್ದಾಗ ಯಾವುದೋ ವಾಹನ ಡಿಕ್ಕಿ ಹೊಡೆದು ಆತನ ತಲೆ ಮೇಲೆ ಚಕ್ರ ಹರಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಈ ಎರಡೂ ಪ್ರಕರಣಗಳನ್ನು ನೆಲಮಂಗಲ ಸಂಚಾರಿ ಠಾಣೆ ಪೆÇಲೀಸರು ದಾಖಲಿಸಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ