ಫೆ.20ರಿಂದ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಆರಂಭ

ಬೆಂಗಳೂರು, ಫೆ.14- ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನವಾದ ಏರೋ ಇಂಡಿಯಾ-2019 ಫೆ.20ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಮುಂಜಾಗ್ರತಾ ಕ್ರಮ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತರು ಮತ್ತು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಕೆಲವು ಮಹತ್ವದ ಆದೇಶ ಹೊರಡಿಸಿದ್ದಾರೆ.

ಯಲಹಂಕ ವಾಯುಪಡೆ ನೆಲೆಯಲ್ಲಿ ನಡೆಯಲಿರುವ ಐದು ದಿನಗಳ ಏರೋ ಇಂಡಿಯಾ ಪ್ರದರ್ಶನದ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಯಲಹಂಕ ಸುತ್ತಮುತ್ತ ಹಾಗೂ ಬೆಂಗಳೂರು ನಗರದ ಕೆಲವೆಡೆ ಅನಧಿಕೃತ ಮಾನವ ರಹಿತ ಹಾರುವ ಯಂತ್ರಗಳು, ಮಾನವ ರಹಿತ ವೈಮಾನಿಕ ವಾಹನಗಳು, ಡ್ರೋಣ್‍ಗಳು, ಬಲೂನ್‍ಗಳು, ಕೃತಕ ವಿಮಾನಗಳ ಹಾರಾಟವನ್ನು ನಿರ್ಬಂಧಿಸಲಾಗಿದೆ.

ಫೆ.20 ರಿಂದ 24ರ ವರೆಗೆ ಈ ನಿರ್ಬಂಧ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ನಗರ ಪೊಲೀಸ್ ಆಯುಕ್ತ ಟಿ.ಸುನಿಲ್‍ಕುಮಾರ್ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ