ವೇಶ್ಯಾವಾಟಿಕೆ ಸಂಬಂಧ ನಾಲ್ವರನ್ನು ಬಂಧಿಸಿದ ಪೊಲೀಸರು

ಮೈಸೂರು, ಫೆ.14- ವಿವಾಹವಾಗುವುದಾಗಿ ನಂಬಿಸಿ ಮಹಿಳೆಯನ್ನು ಕರೆತಂದು ವೇಶ್ಯಾವಾಟಿಕೆಗೆ ದೂಡಿದ್ದ ನಾಲ್ವರನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ.
ನಾಗೇಶ (29), ಶಫಿವುಲ್ಲಾ (38), ಸಂಜಯ್(32) ಹಾಗೂ ಒಬ್ಬ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಆರೋಪಿಗಳ ಪೈಕಿ ನಾಗೇಶ್ ಎಂಬಾತ ಮಹಿಳೆಯನ್ನು ವಿವಾಹವಾಗುವುದಾಗಿ ನಂಬಿಸಿ ಶ್ರೀರಂಗಪಟ್ಟಣಕ್ಕೆ ಕರೆತಂದು ಸ್ನೇಹಿತರಾದ ಆಟೋ ಚಾಲಕ ಸಂಜಯ್ ಮತ್ತು ಶಫಿವುಲ್ಲಾನ ಮೂಲಕ ಮೈಸೂರು-ಬೆಂಗಳೂರು ಮುಖ್ಯರಸ್ತೆಯಲ್ಲಿ ಲಾಡ್ಜ್‍ವೊಂದರ ಮಾಲೀಕ ನಜೀರ್ ಅಹಮ್ಮದ್ ಎಂಬಾತನಿಗೆ ಮಾರಾಟ ಮಾಡಿ ವೇಶ್ಯಾವಾಟಿಕೆಗೆ ದೂಡಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಪೀಪಲ್ಸ್ ಪಾರ್ಕ್‍ನಲ್ಲಿ ಐದು ಮಂದಿಯನ್ನು ಬಂಧಿಸಿ, ಮಹಿಳೆಯನ್ನು ರಕ್ಷಿಸಿ, ಆರೋಪಿಗಳಿಂದ 10ಸಾವಿರ ರೂ. ನಗದು, ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಡಿಸಿಪಿ ವಿಕ್ರಂ ಅಮಟೆ ಮಾರ್ಗದರ್ಶನದಲ್ಲಿ ಸಿಸಿಬಿಯ ಎಸಿಪಿ ಲಿಂಗಪ್ಪ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್‍ಗಳಾದ ಕೃಷ್ಣಪ್ಪ, ಕಿರಣ್‍ಕುಮಾರ್, ಎಎಸ್‍ಐ ಸುಭಾಷ್‍ಚಂದ್ರ, ಚಂದ್ರೇಗೌಡ, ಅಲೆಕ್ಸಾಂಡರ್ ಈ ಕಾರ್ಯಾಚರಣೆ ನಡೆಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ