ಜೈಪುರ,ಫೆ.14- ಆಸ್ಪತ್ರೆಯಲ್ಲೇ ಅವರ ಜಾತಕ ನೀಡುವ ವ್ಯವಸ್ಥೆ ಜಾರಿಗೆ ತರಲು ರಾಜಸ್ಥಾನ ಸರ್ಕಾರ ಮುಂದಾಗಿದೆ.
ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗುವ ಗರ್ಭಿಣಿ ಪ್ರಸವದ ಬಳಿಕ ಮನೆಗೆ ತೆರಳುವ ಸಂದರ್ಭದಲ್ಲಿ ಮಗುವಿನ ಜಾತಕವನ್ನು ನೀಡಲಾಗುತ್ತದೆ. ಅಲ್ಲದೆ ಮಗುವಿಗೆ ಯಾವ ಹೆಸರು ಇಡುವುದು ಒಳ್ಳೆಯದು ಎಂಬ ಸಲಹೆಯನ್ನು ಕೂಡ ನೀಡಲಾಗುವುದು ಎಂದು ತಿಳಿದುಬಂದಿದೆ.
ಪೋಷಕರು ಮಗುವಿನ ಜಾತಕವನ್ನು ಪಡೆದುಕೊಳ್ಳಲು ಖಾಸಗಿ ಆಸ್ಪತ್ರೆಗಳಲ್ಲಿ 101 ರೂ. ಸರ್ಕಾರಿ ಆಸ್ಪತ್ರೆಗಳಲ್ಲಿ 51 ರೂ. ಶುಲ್ಕವನ್ನು ಪಾವತಿಸಬೇಕಿದೆ. ಜಾತಕ ನೀಡಲು ಜೈಪುರದ ಜಗದ್ಗುರು ರಾಮಚಂದ್ರ ಆಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯವನ್ನು ನೋಡಲ್ ಏಜೆನ್ಸಿಯಾಗಿ ನೇಮಕ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಇನ್ನು ಮುಂದೆ ಆಸ್ಪತ್ರೆಯಲ್ಲಿ ಜನಿಸುವ ಶಿಶುಗಳ ಜಾತಕವನ್ನು ಪೋಷಕರು ಅಲ್ಲೇ ಪಡೆದುಕೊಳ್ಳಬಹುದಾಗಿದೆ.