ನಾಳೆಯಿಂದ ಪಾಟ್ನಾದಲ್ಲಿ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ರಾಷ್ಟ್ರೀಯ ಅಧಿವೇಶನ

ಬೆಂಗಳೂರು, ಫೆ.14- ಬಿಹಾರದ ಪಾಟ್ನಾದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ನಡೆಯುತ್ತಿರುವ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ರಾಷ್ಟ್ರೀಯ ಅಧಿವೇಶನದಲ್ಲಿ ಕರ್ನಾಟಕದಿಂದ ಸುಮಾರು 75 ಪ್ರಮುಖ ಮುಖಂಡರು, ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಎಂದು ರಾಜ್ಯ ಒಬಿಸಿ ಮೋರ್ಚಾದ ಉಸ್ತುವಾರಿಯಾದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಒಬಿಸಿ ಮೋರ್ಚಾದ ಧಾರಾಸಿಂಗ್ ಚೌವ್ಹಾಣ್ ಮತ್ತಿತರರು ನಾಳೆ ಕಾರ್ಯಕ್ರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಸ್ವಾತಂತ್ರ್ಯ ಬಂದಾಗಿನಿಂದ ಹಿಂದುಳಿದ ವರ್ಗಕ್ಕೆ ಸಂವಿಧಾನಬದ್ಧ ಹಕ್ಕು ಬೇಕು ಎಂದು ಹೋರಾಟ ನಡೆಸಲಾಗಿತ್ತು.ಯಾವ ಸರ್ಕಾರವು ಆ ಹಕ್ಕನ್ನು ಕೊಟ್ಟಿರಲಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗಕ್ಕೆ ಸಂವಿಧಾನ ಹಕ್ಕು ನೀಡುವ ಉದ್ದೇಶದಿಂದ ಲೋಕಸಭೆ, ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಿದ್ದು, ಅಂಗೀಕಾರವನ್ನು ಪಡೆದಿವೆ. ಹೀಗಾಗಿ ಹಿಂದುಳಿದ ವರ್ಗಕ್ಕೆ ಸಂವಿಧಾನ ಬದ್ಧ ಹಕ್ಕು ದೊರೆತಂತಾಗಿದೆ.ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆಯಲು ಹಿಂದುಳಿದ ವರ್ಗದ ಹೆಚ್ಚು ಮತಗಳಿಕೆಗೆ ನಾವೆಲ್ಲರು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ