ಬೆಂಗಳೂರು, ಫೆ.14- ಬಿಜೆಪಿ ಸದಸ್ಯರ ತೀವ್ರ ಪ್ರತಿಭಟನೆ ನಡುವೆ ಲೇಖಾನುದಾನ ಸೇರಿದಂತೆ ಹಲವು ವಿಧೇಯಕಗಳಿಗೆ ಒಪ್ಪಿಗೆ ಪಡೆದಿದ್ದು, ಇಂದೇ ಕಲಾಪವನ್ನು ಮುಕ್ತಾಯಗೊಳಿಸುವ ಸಾಧ್ಯತೆ ಇದೆ.
ಬಿಜೆಪಿ ಶಾಸಕ ಪ್ರೀತಂಗೌಡ ಅವರ ನಿವಾಸದ ಮೇಲಿನ ದಾಳಿ ಖಂಡಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿ ಕೋಲಾಹಲವೆಬ್ಬಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಲೇಖಾನುದಾನ ಸೇರಿದಂತೆ ಹಲವು ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆದುಕೊಂಡಿತು.ಈ ವೇಳೆ ವಿಧಾನಸಭಾಧ್ಯಕ್ಷರು ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.
ಬಿಜೆಪಿ ಶಾಸಕರು ಧರಣಿ ಮುಂದುವರಿಸುವ ಸಾಧ್ಯತೆ ಇದ್ದು, ಇಂದೇ ಕಲಾಪವನ್ನು ಮುಕ್ತಾಯಗೊಳಿಸಿ ಅನಿರ್ದಿಷ್ಟಾವಧಿಗೆ ಮುಂದೂಡುವ ಸಾಧ್ಯತೆ ಇದೆ.