ಫೆ.23ರಂದು ಸಿಂಗಾಪುರದಲ್ಲಿ ಕೆಂಪೇಗೌಡರ ಎರಡನೇ ಅಂತರಾಷ್ಟ್ರೀಯ ಉತ್ಸವ

ಬೆಂಗಳೂರು, ಫೆ.14-ವಿಶ್ವ ಒಕ್ಕಲಿಗರ ಮಹಾವೇದಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡರ ಎರಡನೇ ಅಂತರಾಷ್ಟ್ರೀಯ ಉತ್ಸವವನ್ನು ಫೆ. 23ರಂದು ಸಿಂಗಾಪುರದಲ್ಲಿ ಹಮ್ಮಿಕೊಂಡಿರುವುದಾಗಿ ವೇದಿಕೆಯ ಪ್ರಧಾನ ಕಾರ್ಯದರ್ಶಿ ರಂಗಣ್ಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಸ್ಪಟಿಕಾಪುರಿ ಮಹಾಸಂಸ್ಥಾನ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.

ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೇಂದ್ರ ಸಚಿವ ಸದಾನಂದಗೌಡ, ಸಚಿವರಾದ ಡಿ.ಕೆ.ಶಿವಕುಮಾರ್, ಡಿ.ಸಿ. ತಮ್ಮಣ್ಣ ಹಾಗೂ ಚಲನಚಿತ್ರ ನಟರಾದ ಯಶ್, ಅಮೂಲ್ಯ, ಸುಮಲತಾಅಂಬರೀಷ್, ಅಭಿಷೇಕ್ ಅಂಬರೀಶ್ ಸೇರಿದಂತೆ ಹಲವಾರು ಗಣ್ಯ ವ್ಯಕ್ತಿಗಳು ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅಂಬಿ ಅಮರ ಹಾಗೂ ಕನ್ನಡೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಇದರ ಅಂಗವಾಗಿ ಕೆಂಪೇಗೌಡರ ಮತ್ತು ಅಂಬರೀಷ್ ಅವರ ಕಿರುಚಿತ್ರ ಪ್ರದರ್ಶನ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಲವಾರು ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ರಂಗಣ್ಣ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ