ಬೆಂಗಳೂರು, ಫೆ.14-ವಿಧಾನಸೌಧದಲ್ಲಿ ದಾಖಲೆ ಇಲ್ಲದ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಭ್ರಷ್ಟಾಚಾರ ನಿಗ್ರಹದಳದಿಂದ ನೋಟಿಸ್ ಜಾರಿಯಾಗಿದೆ.
ಎಸಿಬಿ ಅಧಿಕಾರಿಗಳು, ಸಚಿವರ ಕಚೇರಿಯ ಟೈಪಿಸ್ಟ್ ಮೋಹನ್ ಹಾಗೂ ಮಾಜಿ ಪಿಎಗಳಾದ ಮಂಜುನಾಥ್ ಮತ್ತು ಕೃಷ್ಣಮೂರ್ತಿ ಅವರ ವಿಚಾರಣೆ ನಡೆಸಿದ್ದರು.
ನಂತರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರ ವಿರುದ್ಧವೂ ಆರೋಪ ಕೇಳಿಬಂದಿದ್ದರಿಂದ ಅವರನ್ನೂ ವಿಚಾರಣೆಗೊಳಪಡಿಸಿದ್ದ ಎಸಿಬಿ ಅಧಿಕಾರಿಗಳು ಇದೀಗ ಸಚಿವರ ವಿಚಾರಣೆಗೆ ನೋಟಿಸ್ ನೀಡಿದ್ದಾರೆ.
ಮೂರು ದಿನಗಳೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ಎಸಿಬಿಯ ಎಸ್ಪಿ ನೋಟಿಸ್ ನೀಡಿದ್ದಾರೆ.
ದಾಖಲೆ ಇಲ್ಲದ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಈ ಹಣ ಸಚಿವರಿಗೆ ಸೇರಿದ್ದು ಎಂದು ಹಾಗೂ ಗುತ್ತಿಗೆದಾರರಿಗೆ ಸೇರಿದ್ದು ಎಂದು ಹೇಳಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಎಸಿಬಿ ಗುತ್ತಿಗೆದಾರರನ್ನು ವಿಚಾರಣೆ ನಡೆಸಿತ್ತು.ಇದೀಗ ವಿಚಾರಣೆಗಾಗಿ ಸಚಿವರಿಗೂ ನೋಟಿಸ್ ಜಾರಿಗೊಂಡಿದೆ.