ನಾಡಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕುಂಭಮೇಳದಲ್ಲಿ ಭಾಗವಹಿಸಬೇಕು: ಆದಿಚುಂಚನಗಿರಿ ಶಾಖಾ ಮಠದ ಮಠಾಧೀಶ ಶ್ರೀ ಸೋಮೇಶ್ವರನಾಥ ಸ್ವಾಮೀಜಿ

ಮೈಸೂರು,ಫೆ.14- ಟಿ.ನರಸೀಪುರದ ತಿರುಮಕೂಡಲಿನಲ್ಲಿ ನಡೆಯಲಿರುವ ಕುಂಭಮೇಳ ಕುರಿತು ಮೈಸೂರಿನ ಆದಿಚುಂಚನಗಿರಿ ಶಾಖಾ ಮಠದ ಮಠಾಧೀಶರಾದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅವರು ಮಾಹಿತಿ ನೀಡಿ, ಕುಂಭಮೇಳಕ್ಕೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಮಾಘಮಾಸದ ಈ ಪುಣ್ಯ ದಿನದಲ್ಲಿ ನಡೆಯುವ ಕುಂಭಮೇಳದಲ್ಲಿ ಸ್ನಾನ ಮಾಡಿದರೆ ಒಳಿತಾಗಲಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ವಾರಣಾಸಿ ಮಾದರಿಯಲ್ಲೇ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗುವುದು.ಕೈಲಾಸ ಮಠ, ಆದಿಚುಂಚನಗಿರಿ, ಸುತ್ತೂರು ಮಠಗಳ ಮಠಾಧೀಶರು ಕುಂಭಮೇಳದ ಜವಾಬ್ದಾರಿ ಹೊತ್ತಿದ್ದಾರೆ ಎಂದು ತಿಳಿಸಿದರು.

ಫೆ.17ರಿಂದ ಅಗಸ್ತೇಶ್ವರ ದೇವಾಲಯದಲ್ಲಿ ಪೂಜಾ, ಹೋಮ, ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ ಎಂದು ತಿಳಿಸಿದರು.

ನಾಡಿನ ಜನತೆ ಈ ಕುಂಭಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ