ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ ಹಿನ್ನಲೆ ಕೆಸ್‍ಆರ್‍ಟಿಸಿ ಮತ್ತು ತಮಿಳುನಾಡು ಸಾರಿಗೆ ಸಂಸ್ಥೆಗಳ ಮಾತುಕತೆ

ಬೆಂಗಳೂರು, ಫೆ.16- ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ ಮಾಡಲು ಹಾಗೂ ನೂತನ ಮಾರ್ಗಗಳಲ್ಲಿ ಹೊಸದಾಗಿ ಸಾರಿಗೆಗಳನ್ನು ಪ್ರಾರಂಭಿಸುವ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗಿದೆ.

ಕೆಎಸ್‍ಆರ್‍ಟಿಸಿ ಹಾಗೂ ತಮಿಳುನಾಡು ರಾಜ್ಯಗಳ ಅಂತರಾಜ್ಯ ಸಾರಿಗೆ ಒಪ್ಪಂದ ಸಂಬಂಧದ ಮಾತುಕತೆ ಸಭೆಯಲ್ಲಿ ತಮಿಳುನಾಡು ಸ್ಟೇಟ್ ಎಕ್ಸ್‍ಪ್ರೆಸ್ ಟ್ರಾನ್ಸ್‍ಪೋರ್ಟ್ ಕಾರ್ಪೋರೇಶನ್ ವ್ಯವಸ್ಥಾಪಕ ನಿರ್ದೇಶಕ ಭಾಸ್ಕರನ್, ಟಿಎನ್‍ಎಸ್‍ಟಿಸಿ ಸೇಲಂ ವ್ಯವಸ್ಥಾಪಕ ನಿರ್ದೇಶಕ ಅರವಿಂದ್, ವಿಳ್ಳುಪುರಂ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಗಣೇಶನ್, ಕೆಎಸ್‍ಆರ್‍ಟಿಸಿ ನಿರ್ದೇಶಕ ಪಿ.ಆರ್.ಶಿವಪ್ರಸಾದ್ ಭಾಗವಹಿಸಿದ್ದರು.

ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ಈ ಹಿಂದಿನ ಅಂತರರಾಜ್ಯ ಸಾರಿಗೆಒಪ್ಪಂದವು 2007-08ನೇ ಸಾಲಿನಲ್ಲಿ ಏರ್ಪಟ್ಟಿತ್ತು. ನಂತರ ಈವರೆಗೆ ಯಾವುದೇ ಮಾತುಕತೆ ನಡೆದಿರಲಿಲ್ಲ. ಸದರಿ ಅವಧಿಯಲ್ಲಿ ಎರಡೂ ರಾಜ್ಯಗಳ ನಡುವೆ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದ್ದು, ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ ಮಾಡಲು ಹಾಗೂ ನೂತನ ಮಾರ್ಗಗಳಲ್ಲಿ ಹೊಸದಾಗಿ ಸಾರಿಗೆಗಳನ್ನು ಪ್ರಾರಂಭಿಸಲು ಸಾರ್ವಜನಿಕ ಪ್ರಯಾಣಿಕರಿಂದ ಹೆಚ್ಚಿನ ಬೇಡಿಕೆ ಇರುವುದರ ಹಿನ್ನೆಲೆಯಲ್ಲಿ ಈ ಒಪ್ಪಂದವುಎರಡೂ ರಾಜ್ಯಗಳ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈ ನಿಟ್ಟಿನಲ್ಲಿ ಎರಡೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಮುಕ್ತ ಮನಸ್ಸಿನಿಂದ ಚರ್ಚೆ ನಡೆಸಿ, ಅಂತಿಮಒಪ್ಪಂದಕ್ಕೆ ಬರುವುದು ಅತೀ ಅವಶ್ಯಕವಾಗಿದೆ ಎಂದು ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸದ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ