ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ಪಾಕ್ ಪರ ಘೋಷಣೆ ಕೂಗಿದ ತಿಳಿಗೇಡಿ

ಮಹಾರಾಷ್ಟ್ರ,ಫೆ.16- ಪುಲ್ವಾಮದಲ್ಲಿ ಉಗ್ರರು ನಡೆಸಿರುವ ದಾಳಿಗೆ 45ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ. ಇಡೀ ದೇಶವೇ ಶೋಕದಲ್ಲಿರುವಾಗ ಕಿಡಿಗೇಡಿಯೊಬ್ಬ ಪಾಕ್ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ.

ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ಘಟನೆ ನಡೆದಿದ್ದು, ಪಾಕ್ ಪರ ಘೋಷಣೆ ಕೂಗಿದ ಮಹಾರಾಷ್ಟ್ರದ ಜೆಆರ್ ಟಿಕೆಟ್ ಕಲೆಕ್ಟರ್ ಉಪೇಂದ್ರ ಮಹದ್ದೂರ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಿರುದ್ಧ ಐಪಿಸಿ 153 (ಬಿ) ಅಡಿ ಪ್ರಕರಣ ದಾಖಲಾಗಿದೆ. ಪುಣೆಯ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ