ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ 30 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಫೆ.17- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ 30 ಮಂದಿ ಹಿರಿಯ ಹಾಗೂ ಕಿರಿಯ ಶ್ರೇಣಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆ, ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವೆಂಕಟಾಚಲಪತಿ, ಮೈಸೂರು ಜಿಲ್ಲೆ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಜಿ.ಅನುರಾಧಾ, ಶಿವಮೊಗ್ಗ ಜಿಲ್ಲೆ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಜಿ.ಆರ್.ಪೂರ್ಣಿಮಾ, ಧಾರವಾಡ ಜಿಲ್ಲೆ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ.ಸುರೇಶ್ ಹಿಟ್ನಾಳ್ ವರ್ಗಾಯಿಸಲಾಗಿದೆ.

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಇಬ್ರಾಹಿಂ ಮೈಗೂರು, ಮಂಡ್ಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಎಂ.ಜೆ.ರೂಪಾ, ಕಾಲೇಜು ಶಿಕ್ಷಣ ಇಲಾಖೆ ಮುಖ್ಯ ಆಡಳಿತಾಧಿಕಾರಿಯಾಗಿ ಕೆ.ಎಚ್.ಜಗದೀಶ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಡಾ.ಡಿ.ಷಣ್ಮುಖ, ಬೈಲಹೊಂಗಲ ಉಪವಿಭಾಗಾಧಿಕಾರಿಯಾಗಿ ಮಹದೇವ ಎಂ.ಮುರಗಿ ಹಾಗೂ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿಯಾಗಿ ಪಿ.ಎಸ್.ಮಂಜುನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಹುಣಸೂರು ಉಪವಿಭಾಗಾಧಿಕಾರಿಯಾಗಿ ಎಚ್.ಜಿ.ಚಂದ್ರಶೇಖರಯ್ಯ, ಗದಗ ಉಪವಿಭಾಗಾಧಿಕಾರಿಯಾಗಿ ಶಿವಪ್ಪ ಎಲ್ಲಪ್ಪ ಭಜಂತ್ರಿ, ಗದಗ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ರವೀಂದ್ರ ಕರಿಲಿಂಗಣ್ಣನವರ್, ಮಧುಗಿರಿ ಉಪವಿಭಾಗಾಧಿಕಾರಿಯಾಗಿ ಬಿ.ಎನ್.ವೀಣಾ, ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಸಿದ್ದಪ್ಪ ಪರಪ್ಪ ಹುಲ್ಲೋಳಿ, ಚಿಕ್ಕೋಡಿ ಉಪವಿಭಾಗಾಧಿಕಾರಿಯಾಗಿ ಸೋಮಲಿಂಗ ಗೋಪಾಲ ಗೆಣ್ಣೂರ ಅವರನ್ನು ನೇಮಿಸಿ ವರ್ಗಾಯಿಸಲಾಗಿದೆ.

ದಾವಣಗೆರೆ ಮಹಾನಗರ ಪಾಲಿಕೆ ಉಪ ಆಯುಕ್ತ (ಕಂದಾಯ) ಸಯ್ಯದ್ ಅಫ್ರಿನ್ ಭಾನು ಎಸ್. ಬಳ್ಳಾರಿ, ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಎಂ.ಕೆ.ಸವಿತಾ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಆಯುಕ್ತರ ಕೇಂದ್ರ ಸ್ಥಾನಿಕ ಸಹಾಯಕರಾಗಿ ಡಾ.ದಾಸೇಗೌಡ ಎಂ., ಧಾರವಾಡ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಶಾರದಾ ಸಿ.ಕೋಲಕಾರ, ವಿಜಯಪುರ ಉಪವಿಭಾಗಾಧಿಕಾರಿಯಾಗಿ ಎಸ್.ಎನ್.ರುದ್ರೇಶ್, ಕೃಷ್ಣ ಮೇಲ್ದಂಡೆ ಯೋಜನೆ ಪುನರ್ವಸತಿ ಅಧಿಕಾರಿಯಾಗಿ ಶ್ರೀಹರ್ಷ ಎಸ್.ಶೆಟ್ಟಿ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಅಲ್ಲದೆ, ಗದಗದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಉಪನಿರ್ದೇಶಕರಾಗಿ ಸದಾಶಿವ ಮಿರ್ಜಿ, ಧಾರವಾಡದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಉಪನಿರ್ದೇಶಕರಾಗಿ ಅಶೋಕ್ ಕಳಘಟಗಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ರವೀಂದ್ರ ಬಿ.ಮಲ್ಲಾಪುರ ಅವರನ್ನು ವರ್ಗಾವಣೆ ಮಾಡಲಾಗಿದೆ.

ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮಾಯಣ್ಣಗೌಡ ಅವರನ್ನು ವರ್ಗಾಯಿಸಿದ್ದು, ತುಂಗಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಅಬೀದ್ ಗದ್ಯಾಳ, ಬೆಳಗಾವಿಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಉಪನಿರ್ದೇಶಕರಾಗಿ ರಮೇಶ್ ಕೋಲಾರ, ರಾಮನಗರ ಡಿಯುಡಿಸಿ ಯೋಜನಾ ನಿರ್ದೇಶಕರಾಗಿ ಸೂರಜ್ ಎಸ್.ಆರ್., ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಜಿಲ್ಲಾಧಿಕಾರಿಯಾಗಿ ಸಿದ್ದರಾಮೇಶ್ವರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ