ಬೆಂಗಳೂರು, ಫೆ.17- ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ 15 ಮಂದಿ ಹಿರಿಯ ಹಾಗೂ ಕಿರಿಯ ಶ್ರೇಣಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ನೀರು ಸರಬರಾಜು ಮಂಡಳಿ ಮುಖ್ಯ ಆಡಳಿತಾಧಿಕಾರಿ ಮತ್ತು ಕಾರ್ಯದರ್ಶಿ ಹುದ್ದೆಯಲ್ಲೇ ಕೃಷ್ಣಗೌಡ ತಾಯಣ್ಣನವರನ್ನು ಮುಂದುವರಿಸಲಾಗಿದ್ದು, ಇವರ ವರ್ಗಾವಣೆ ಆದೇಶವನ್ನು ರದ್ದುಪಡಿಸಲಾಗಿದೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿಯಾಗಿ ಪಿ.ಲಕ್ಷ್ಮಮ್ಮ, ತೋಟಗಾರಿಕೆ ಇಲಾಖೆ ಅಪರ ನಿರ್ದೇಶಕರು (ಆಡಳಿತ) ಎಸ್.ಚಂದ್ರಶೇಖರ್, ಕರ್ನಾಟಕ ವಿದ್ಯುತ್ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿ ಎಸ್.ಎನ್.ಬಾಲಚಂದ್ರ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ-1 ಹುದ್ದೆಗೆ ಬಿ.ಆರ್.ಹರೀಶ್ ಅವರನ್ನು ವರ್ಗಾಯಿಸಲಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಹಾಯಕ ಆಯುಕ್ತರು (ಜಾರಿ) ಎನ್.ಎಸ್.ಚಿದಾನಂದ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಎನ್.ರಾಚಪ್ಪ, ಎತ್ತಿನಹೊಳೆ ಯೋಜನೆ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಆರ್.ಅನಿಲ್ಕುಮಾರ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ-3 ಹುದ್ದೆಗೆ ಡಾ.ಎನ್.ಭಾಸ್ಕರ್ ಅವರನ್ನು ವರ್ಗಾಯಿಸಿ ಆದೇಶಿಸಲಾಗಿದೆ.
ಕೆಎಎಸ್ ಕಿರಿಯ ಶ್ರೇಣಿಯ ಪರೀಕ್ಷಾರ್ಥ ಅಧಿಕಾರಿಗಳಾದ ಎ.ಎನ್.ರಘುನಂದನ್ ಅವರನ್ನು ಬಿಬಿಎಂಪಿ ಸಹಾಯಕ ಆಯುಕ್ತರು (ಮಾರುಕಟ್ಟೆ) ಹುದ್ದೆಗೆ ಆರ್.ಐಶ್ವರ್ಯ ಅವರನ್ನು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ, ಜಿ.ಡಿ.ಶೇಖರ್ ಅವರನ್ನು ಎತ್ತಿನಹೊಳೆ ಯೋಜನೆ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ನೇಮಿಸಲಾಗಿದೆ.
ಜಮಖಂಡಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಶಾಂತ ಹನಗಂಡಿ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಸಹಾಯಕ ಆಯುಕ್ತರು (ವಿದ್ಯಾರ್ಥಿ ವೇತನ) ಅದ ಫಾತಿಮಾ, ಸ್ಥಳ ನಿರೀಕ್ಷಣೆಯಲ್ಲಿದ್ದ ಕೆ.ಜಿ.ಆಂಜನಪ್ಪ ಅವರನ್ನು ಪಶುಪಾಲನಾ ಮತ್ತು ಪಶು ವೈದ್ಯ ಸೇವೆಗಳ ನಿರ್ದೇಶನಾಲಯದ ಜಂಟಿ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.