
ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರ ಗುಂಡಿನ ದಾಳಿಗೆ ಓರ್ವ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಜೈಶ್ ಇ ಮೊಹಮ್ಮದ್ ಉಗ್ರರ ಬೀಕರ ದಾಳಿಗೆ 40 ಯೋಧರು ಬಲಿಯಾದ ಬೆನ್ನಲ್ಲೇ ಪುಲ್ವಾಮಾದಲ್ಲಿ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ತೀವ್ರಗೊಂಡಿದ್ದು, ಇಂದು ಬೆಳಿಗ್ಗೆ ಸೇನೆಯ ಜಂಟಿ ಕಾರ್ಯಾಚರಣೆ ವೇಳೆ ಉಗ್ರರು ದಾಳಿ ನಡೆಸಿದ್ದು, ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಮೇಜರ್ ವಿ.ಎಸ್. ದೌಂಡಿಯಾಲ್, ಹವಾಲ್ದಾರ್ ಶೇಹೋ ರಾಮ್, ಸಿಪಾಯಿ ಅಜಯ್ಕುಮಾರ್ ಮತ್ತು ಸಿಪಾಯಿ ಹರಿ ಸಿಂಗ್ ಹುತಾತ್ಮರಾದ ಯೋಧರು.
ಪುಲ್ವಾಮಾದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಸೇನೆಯ 55ಆರ್ಆರ್, ಸಿಆರ್ಪಿಎಫ್ ಮತ್ತು ಎಸ್ಒಜಿ ಜಂಟಿ ಶೋಧ ಕಾರ್ಯಾಚರಣೆ ಕೈಗೊಂಡಿತ್ತು.
4 Army personnel including a Major killed in pulwama