ಮೈಸೂರು, ಫೆ.18- ಮೂರು ಸಾವಿರ ಮಂದಿ ನಿರುದ್ಯೋಗಿಗಳಿಗೆ ಉದ್ಯೋಗಕೊಡಿಸುವ ನಿಟ್ಟಿನಲ್ಲಿ ಫೆ.25ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ಯೋಗ ಮೇಳದ ವೆಬ್ಸೈಟ್ ಬಿಡುಗಡೆ ಮಾಡಿ ಮಾತನಾಡಿ ಅವರು, ಮೈಸೂರು ಮತು ್ತಚಾಮರಾಜ ನಗರದಲ್ಲಿರುವ ನಿರುದ್ಯೋಗಿ ಯುವಜನರ ಅನುಕೂಲಕ್ಕಾಗಿ ಈ ಮೇಳವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಉದ್ಯೋಗ ಮೇಳದಲ್ಲಿ ಭಾಗವಹಿಸುವವರಿಗಾಗಿ 15 ಕೌಂಟರ್ಗಳನ್ನು ತೆರೆಯಲಾಗಿದ್ದು, 50 ಸ್ಟಾಲ್ಗಳನ್ನು ಹಾಕಲಾಗುತ್ತದೆ.ಎಸ್ಸೆಸ್ಸೆಲ್ಸಿಯಿಂದ ಹಿಡಿದು ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳಿಗೆ ಇದು ಅನುಕೂಲವಾಗಲಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮಾತನಾಡಿ, ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೋರಿದರು.
ವಿವಿಧ ಇಲಾಖೆಯ ಅಧಿಕಾರಿಗಳು ಈ ವೇಳೆ ಹಾಜರಿದ್ದರು.