ಉಗ್ರರೊಂದಿಗೆ ಸೇರಿ ಬಂದೂಕು ಹಿಡಿದವರೆಲ್ಲರೂ ಶರಣಾಗಿ: ಭಾರತೀಯ ಸೇನೆ ಎಚ್ಚರಿಕೆ

ಶ್ರೀನಗರ: ಉಗ್ರರ ಜತೆ ಸೇರಿ ಬಂದೂಕು ಹಿಡಿದವರೆಲ್ಲರೂ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಭಾರತೀಯ ಸೇನೆ ಕಾಶ್ಮೀರದ ಉಗ್ರರಿಗೆ ಖಡಕ್ ಎಚ್ಚರಿಕೆ ನೀಡಿದೆ.

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹತ್ಯೆ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿ, ಬಂದೂಕುಧಾರಿಗಳಾಗಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಮನವಿ ಮಾಡಿದರು.

ಈ ವೇಳೆ ಮಾತನಾಡಿದ ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್, ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಕಾಶ್ಮೀರಿ ಸಮಾಜದಲ್ಲಿ ಮಕ್ಕಳ ತಾಯಂದಿರು ವಿಶೇಷ ಪಾತ್ರವಹಿಸುತ್ತಾರೆ. ಹೀಗಾಗಿ ಮಾಧ್ಯಮಗಳ ಮೂಲಕ ಅವರಲ್ಲಿ ಮನವಿ ಮಾಡುತ್ತಿದ್ದೇವೆ. ಉಗ್ರರ ಜೊತೆ ಕೈ ಜೋಡಿಸಿರುವ ಮಕ್ಕಳನ್ನು ಶರಣಾಗುವಂತೆ ಮನವೊಲಿಸಿ ಮುಖ್ಯವಾಹಿನಿಗೆ ಮರಳುವಬಂತೆ ಮಾಡಬೇಕು. ಒಂದು ವೇಳೆ ಶರಣಾಗದೇ ಹೋದಲ್ಲಿ ಸೇನೆಯೇ ಅವರನ್ನು ನಿರ್ಮೂಲನೆ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.

Anyone Who Picks Up A Gun In Kashmir Will Be Eliminated”: Army

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ