
ಬೆಂಗಳೂರು- ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಸದ್ಯಕ್ಕೆ ವಿಭಜನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ವಿಭಜಿಸಿ ಹಾಸನದಲ್ಲಿ ಪ್ರತ್ಯೇಕ ತಾಂತ್ರಿಕ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂಬುದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸಮಾರಂಭವೊಂದರಲ್ಲಿ ನೀಡಿದ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂದಿರುವ ಮುಖ್ಯಮಂತ್ರಿಗಳು ಹಾಸನವನ್ನು ಅತ್ಯುತ್ತಮ ಶೈಕ್ಷಣಿಕ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.