ದಾವಣಗೆರೆ, ಫೆ.19-ಜಮ್ಮು-ಕಾಶ್ಮೀರದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ನಡೆದ ಆತ್ಮಾಹುತಿ ದಾಳಿಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ವತಿಯಿಂದ ಜಯದೇವ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ಪಾಕಿಸ್ತಾನದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಉಗ್ರಗಾಮಿಗಳನ್ನು ಸದೆಬಡಿಯಲು ಒತ್ತಾಯಿಸಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕೆಂದು ವೇದಿಕೆಯ ಜಿಲ್ಲಾಧ್ಯಕ್ಷ ಎಸ್.ಎಂ.ರಾಜು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಉಗ್ರಗಾಮಿಗಳ ಪ್ರತಿಕೃತಿ ದಹಿಸಿದ್ದಲ್ಲದೆ, ಉಗ್ರರನ್ನು ಬೆಂಬಲಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ಸರ್ಕಾರ ತಕ್ಕ ಶಾಸ್ತಿ ಮಾಡಬೇಕೆಂದು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.
ಈ ವೇಳೆ ಮಲ್ಲಿಕಾರ್ಜುನ, ಅಣ್ಣಪ್ಪ-ಹನುಮಂತಪ್ಪ, ಲೋಕೇಶ್ ದೇವನಹಳ್ಳಿ, ರವಿಂದ್ರ, ಧನೂ, ನಿಶಾಂತ, ದೀಪು, ನಾಗರಾಜ್,ಸುನೀಲ್ ಮತ್ತಿತರರಿದ್ದರು.