
ಮೈಸೂರು, ಫೆ.19- ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ನಗರದ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎಡತಾಳು ಗ್ರಾಮದ ನಿವಾಸಿ ರಘುನಂದ (35), ನಿಲುವಾಗಿಲು ಗ್ರಾಮದ ಪ್ರಶಾಂತ (30) ಹಾಗೂ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಗ್ರಾಮದ ಪ್ರದೀಪ್ (29) ಬಂಧಿತ ಆರೋಪಿಗಳು.
ವಿಜಯನಗರ 4ನೆ ಹಂತದ 2ನೆ ಫೇಸ್‍ನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಬಂಧಿತರಿಂದ 10,200ರೂ.ನಗದು, 8 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
ಸಿಸಿಬಿ ಎಸಿಪಿ ಲಿಂಗಪ್ಪ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಕಿರಣ್‍ಕುಮಾರ್, ವಿಜಯನಗರ ಠಾಣೆ ಇನ್ಸ್‍ಪೆಕ್ಟರ್ ಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು.