
ಬೆಂಗಳೂರು: ಈಗಲ್ ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಗಣೇಶ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಜನವರಿ 20ರಂದು ಈಗಲ್ ಟನ್ ರೆಸಾರ್ಟ್ನಲ್ಲಿ ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿದ ಬಳಿಕ ಗಣೇಶ್ ತಲೆಮರೆಸಿಕೊಂಡಿದ್ದರು. ಗಣೇಶ್ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಅಂದಿನಿಂದ ಶಾಸಕ ಗಣೇಶ್ ತಲೆಮರೆಸಿಕೊಂಡಿದ್ದರು.
ಹೊರ ರಾಜ್ಯದಲ್ಲಿ ಗಣೇಶ್ ನನ್ನು ಬಿಡದಿ ಪೊಲೀಸರು ಬಂಧಿಸಿದ್ದು, ಬೆಂಗಳೂರಿಗೆ ಕರೆ ತರಲಾಗುತ್ತಿದೆ. ಇನ್ನು ಹಲ್ಲೆ ಪ್ರಕರಣ ಸಂಬಂಧ ಮೊನ್ನೆಯಷ್ಟೇ ಶಾಸಕ ಗಣೇಶ್ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿ, ಬಳಿಕ ವಾಪಸ್ ಪಡೆದುಕೊಂಡಿದ್ದರು.
Kampli MLA Ganesh arrested